‘ಸಮರ್ಥ’ ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸಲು ಕರೆ
Bellary Kumarswamy Sriramulu election
ಬಳ್ಳಾರಿ, ನ. : ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಮತನೀಡಬೇಡಿ ಎಂದು ಹೇಳಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪರೋಕ್ಷವಾಗಿ ಪಕ್ಷೇತರ ಅಭ್ಯರ್ಥಿ ಶ್ರೀರಾಮುಲುರನ್ನು ಬೆಂಬಲಿಸುವಂತೆ ಕರೆನೀಡಿದ್ದಾರೆ. ಬಳ್ಳಾರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮರ್ಥ ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದರು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ರಾಜ್ಯದ ಜನರನ್ನು ಕಡೆಗಣಿಸಿದೆ. ಈ ಹಿನ್ನೆಲೆಯಲ್ಲಿ ಆ ಪಕ್ಷಗಳನ್ನು ತಿರಸ್ಕರಿಸಿ, ಪಕ್ಷೇತರ ಅಭ್ಯರ್ಥಿಗೆ ತಮ್ಮ ಮತ ನೀಡಿ ಎಂದರು.
ಶ್ರೀರಾಮುಲುಗೆ ಬೆಂಬಲ ನೀಡುತ್ತೀರಾ ಎಂದು ಮಾಧ್ಯಮದವರು ಪದೇ ಪದೇ ಪ್ರಶ್ನಿಸಿದಾಗ, ಅದಕ್ಕೆ ಸ್ಪಷ್ಟ ಉತ್ತರ ನೀಡದ ಕುಮಾರಸ್ವಾಮಿ, ಕಾಂಗ್ರೆಸ್, ಬಿಜೆಪಿ ತಿರಸ್ಕರಿಸಿ, ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿ ಎಂದಷ್ಟೇ ಹೇಳಿ ಜಾರಿಕೊಳ್ಳುವ ಯತ್ನ ನಡೆಸಿದರು. ಬಳ್ಳಾರಿಯಲ್ಲಿ ಆತಂಕದ ವಾತಾವರಣವಿದೆ ಎಂಬ ಮುಖ್ಯಮಂತ್ರಿ ಸದಾನಂದ ಗೌಡ ಹಾಗೂ ಯಡಿಯೂರಪ್ಪರ ಹೇಳಿಕೆಗೆ ಕಿಡಿಗಾರಿದ ಕುಮಾರಸ್ವಾಮಿ, ಕಳೆದ ಮೂರು ವರ್ಷಗಳಿಂದ ಯಡಿಯೂರಪ್ಪ ಹಾಗೂ ಸದಾನಂದ ಗೌಡ ಈ ಕುರಿತು ಏಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿದರು.ಶ್ರೀರಾಮುಲುಗೆ ಕೆಲವು ದಿನಗಳ ಹಿಂದೆ ಸಚಿವ ಸ್ಥಾನ ನೀಡುವುದಾಗಿ ಆಮಿಷವೊಡ್ಡಿದ್ದ ಬಿಜೆಪಿ ಮುಖಂಡರು, ಈಗ ರಾಗ ಬದಲಿಸಿದ್ದು, ಬಳ್ಳಾರಿಯಲ್ಲಿ ಗೂಂಡಾಗಿರಿ ಹೆಚ್ಚಾಗಿದೆ ಎಂದು ಶ್ರೀರಾಮುಲು ಮೇಲೆ ಗೂಬೆ ಕೂರಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಬಳ್ಳಾರಿಯಲ್ಲಿ ಭಯ, ಆತಂಕದ ವಾತಾವರಣವಿದೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸದಾನಂದ ಗೌಡರಿಗೆ ಆ ಸ್ಥಾನದಲ್ಲಿರಲು ನೈತಿಕತೆ ಇಲ್ಲ. ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಚ್‌ಡಿಕೆ ಆಗ್ರಹಿಸಿದರು.
ಬಿಜೆಪಿಯಲ್ಲಿ ನಡೆದ ಒಳ ಜಗಳದಿಂದಲೇ ಬಳ್ಳಾರಿಯಲ್ಲಿ ಉಪ ಚುನಾವಣೆ ನಡೆಯಲು ಕಾರಣವಾಗಿದೆ. ಚುನಾವಣೆಯಲ್ಲಿ ಬಿಜೆಪಿಗೆ ತಿರುಗೇಟು ನೀಡುವುದ್ಕಕಾಗಿಯೇ ಜೆಡಿಎಸ್ ಅಭ್ಯರ್ಥಿಯನ್ನು ಕಣ್ಕಕಿಳಿಸಿಲ್ಲ. ಪಕ್ಷದ ಎಲ್ಲ ಮುಖಂಡರ ಅಭಿಪ್ರಾಯ ಪಡೆದೇ ಅಭ್ಯರ್ಥಿಯನ್ನು ಕಣ್ಕಕಿಳಿಸದೇ ಇರಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಪಕ್ಷದ ಬಳ್ಳಾರಿ ಜಿಲ್ಲಾಧ್ಯಕ್ಷ ಸೂರ್ಯ ನಾರಾಯಣ ರೆಡ್ಡಿಯೊಂದಿಗೆ ಭಿನ್ನಾಭಿಪ್ರಾಯವಿದೆಯೇ ಎಂಬುದರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷರೊಂದಿಗೆ ಉತ್ತಮ ಬಾಂಧವ್ಯವಿದೆ ಎಂದು ತಿಳಿಸಿದರು.
ಅನ್ಯ ಮಾರ್ಗದ ಮೂಲಕ ಚುನಾವಣೆಯಲ್ಲಿ ಗೆಲ್ಲಲು ಹರ ಸಾಹಸ ನಡೆಸಿರುವ ಬಿಜೆಪಿ ಮುಖಂಡರು, ಮದುವೆಯ ಹೆಸರಿನಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳ ಮೂಲಕ ಗ್ರಾಮಾಂತರ ಪ್ರದೇಶದ ಜನರನ್ನು ಚುನಾವಣಾ ಪ್ರಚಾರ್ಕಕೆ ಕರೆತಂದು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಚುನಾವಣೆ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕಿಡಿಗಾರಿದ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯನ್ನು ಅವರು ನೆನಪಿಸಿಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.
0 comments:
Post a Comment