PLEASE LOGIN TO KANNADANET.COM FOR REGULAR NEWS-UPDATES


ನೀತಿ ಸಂಹಿತೆ ಉಲ್ಲಂಘನೆ : ಶೋಕಾಸ್ ನೋಟಿಸ್ ಜಾರಿ
 Bellary 
ಬೆಂಗಳೂರು, ನ.23: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಸೇರಿದಂತೆ ನಾಯಕರ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ. ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಅಭ್ಯರ್ಥಿ ಗಾದಿಲಿಂಗಪ್ಪ ಹಾಗೂ ಎಂಎಲ್‌ಸಿ ಶಶಿಲ್ ನಮೋಶಿ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿರುವ ಚುನಾವಣಾ ಆಯೋಗ, ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದೆ ಎಂದು ಚುನಾವಣಾ ವಿಶೇಷಾಧಿಕಾರಿ ಮನೋಜ್ ತಿಳಿಸಿದ್ದಾರೆ.
ನಾಳೆ ಸಂಜೆಯೊಳಗೆ ಮೂವರು ಉತ್ತರವನ್ನು ನೀಡಬೇಕಾಗಿದ್ದು, ಈ ಸಂಬಂಧ ಮೂವರಿಗೂ ನೋಟಿಸ್ ಕಳುಹಿಸಲಾಗಿದೆ ಎಂದರು. ಕಳೆದ ಕೆಲವು ದಿನಗಳಿಂದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವ ಈಶ್ವರಪ್ಪರಿಗೆ ಈಗ ಸಂಕಷ್ಟ ಎದುರಾಗಿದೆ.
ನ.19ರಂದು ಬಳ್ಳಾರಿಯ ದೇವಸ್ಥಾನವೊಂದರಲ್ಲಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಅಭ್ಯರ್ಥಿ ಗಾದಿಲಿಂಗಪ್ಪ ಹಾಗೂ ಎಂಎಲ್‌ಸಿ ಶಶಿಲ್ ನಮೋಶಿ ಚುನಾವಣಾ ಪ್ರಚಾರ ಸಭೆ ನಡೆಸಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರು.
ಈ ಕುರಿತು ದೂರು ದಾಖಲಿಸಿಕೊಂಡಿದ್ದ ಸ್ಥಳೀಯ ಚುನಾವಣಾ ಆಯುಕ್ತರು, ಚುನಾವಣಾ ಆಯೋಗಕ್ಕೆ ವಿವರಣೆ ಸಲ್ಲಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಈಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಮನೋಜ್ ತಿಳಿಸಿದ್ದಾರೆ. ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಆಯೋಗ ಈ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇನ್ನು ಮುಂದೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಿರುವಂತೆ ಎಚ್ಚರಿಕೆ ಕೂಡಾ ನೀಡಿದ್ದಾರೆ

Advertisement

0 comments:

Post a Comment

 
Top