PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ನ. : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಸೃತಿ ಇಲಾಖೆ, ಇವರ ಸಂಯುಕ್ತಾಶ್ರಯದಲಿ ಭಕ್ತ ಕನಕದಾಸ ಜಯಂತಿ ಆಚರಣೆ ಸಮಾರಂಭ ನ. ೧೪ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಜರುಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಸ. ಸವದಿ ಅವರು ನೆರವೇರಿಸುವರು.  ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಸಂಗಣ್ಣ ಕರಡಿ ವಹಿಸುವರು. ಮುಖ್ಯ ಅತಿಥಿಗಳಾಗಿ ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ್ ವಲ್ಲ್ಯಾಪುರ, ಕರಕುಶಲ ಅಭಿವೃದ್ಧಿ ನಿಗಮ ಅಧ್ಯಕ್ಷೆ ಲಲತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ್, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಜಿಲ್ಲಾ ಪಂಚಾಯತ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪೂರ್, ಈಶಣ್ಣ ಗುಳಗಣ್ಣವರ್, ಪರಣ್ಣ ಮುನವಳ್ಳಿ, ಶಿವರಾಜ ಎಸ್. ತಂಗಡಗಿ, ಶಶೀಲ್ ಜಿ. ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ, ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ, ಡಾ. ಸೀತಾ ಗೂಳಪ್ಪ ಹಲಗೇರಿ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ತಾಲೂಕ ಪಂಚಾಯತ ಅಧ್ಯಕ್ಷ ಅಮರೇಶ ಉಪಲಾಪೂರ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಪ್ಪಣ್ಣ ಪದಕಿ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರು ಭಾಗವಹಿಸುವರು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ ಅವರು ಭಾಗವಹಿಸುವರು  ಇದೇ ಸಂದರ್ಭದಲ್ಲಿ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕ ಬಸವರಾಜ ಕೊಂಡಗುರಿ ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸುವರು. 
ಜಯಂತಿಯ ಅಂಗವಾಗಿ ಅಂದು ಭಕ್ತ ಕನಕದಾಸರ ಭಾವಚಿತ್ರದ ಮೆರವಣಿಗೆ ಬೆಳಿಗ್ಗೆ ೯ ಗಂಟೆಗೆ ಶ್ರೀ ಸಿರಸಪ್ಪಯ್ಯನಮಠದ ಆವರಣದಿಂದ ಸಾಹಿತ್ಯ ಭವನದವರೆಗೆ ನಡೆಯಲಿದ್ದು, ಡೊಳ್ಳು ಕುಣಿತ, ಕರಡಿ ಮಜಲು ಸೇರಿದಂತೆ ವೈವಿಧ್ಯಮಯ ಕಲಾತಂಡಗಳು  ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.

Advertisement

0 comments:

Post a Comment

 
Top