PLEASE LOGIN TO KANNADANET.COM FOR REGULAR NEWS-UPDATES


 ಕೊಪ್ಪಳ ನ.  : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ನಾಲ್ಕನೇ ಸಮ್ಮೇಳನವನ್ನು ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರಿನಲ್ಲಿ ೨೦೧೨ ಜನವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲು ಅಕಾಡೆಮಿ ಉದ್ದೇಶಿಸಿದೆ. ಈ ಸಮ್ಮೇಳನ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ದಿಗಂತಗಳು, ಸವಾಲುಗಳು ಮತ್ತು ಅವಕಾಶಗಳು ಎಂಬ ಕೇಂದ್ರ ವಿಷಯದಡಿ ಆಯೋಜಿಸಿದೆ.
ಸಮ್ಮೇಳನದಲ್ಲಿ ನಾಡಿನ ಶ್ರೇಷ್ಠ ವಿಜ್ಞಾನಿಗಳಿಂದ, ಶಿಕ್ಷಣ ತಜ್ಞರಿಂದ ಹಾಗೂ ವಿಷಯ ಪರಿಣಿತರಿಂದ ಪಾಂಡಿತ್ಯ ಪೂರ್ಣ ಉಪನ್ಯಾಸಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ದಿಗಂತಗಳ ಬಗ್ಗೆ ಏರ್ಪಡಿಸಿದೆ. ಸಮ್ಮೇಳನದಲ್ಲಿ ಸುಮಾರು ೬೦೦ ಪ್ರತಿನಿಧಿಗಳು ಭಾಗವಹಿಸಲು ಅವಕಾಶವಿದ್ದು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜ್ಯದ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ಉಪನ್ಯಾಸಕರು, ಪ್ರಾಧ್ಯಾಪಕರು, ವಿಜ್ಞಾನಿಗಳು ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪದವಿ, ಸ್ನಾತಕೋತ್ತರ, ಸಂಶೋಧನಾ ವಿದ್ಯಾರ್ಥಿಗಳು, ವಿಜ್ಞಾನ ಬರಹಗಾರರು ಮತ್ತು ವಿಜ್ಞಾನಾಸಕ್ತರು ಪ್ರತಿನಿಧಿಗಳಾಗಿ ಭಾಗವಹಿಸಬಹುದಾಗಿದೆ.
ಆಸಕ್ತಿಯುಳ್ಳವರು ಸಮ್ಮೇಳನದಲ್ಲಿ ಭಾಗವಹಿಸಲು ಡಿ. ೩೧ ರೊಳಗೆ ಕೋರಿಕೆ ಪತ್ರದೊಂದಿಗೆ ತಮ್ಮ ಸಂಕ್ಷಿಪ್ತ ಸ್ವವಿರವನ್ನು ಅಂಚೆ ಮೂಲಕ ಅಥವಾ ಇ-ಮೇಲ್ ಮೂಲಕ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ನಂ. ೨೪/೨, ೨೧ನೇ ಮುಖ್ಯ ರಸ್ತೆ, ಬನಶಂಕರಿ ೨ನೇ ಹಂತ, ಬೆಂಗಳೂರು ದೂರವಾಣಿ: ೦೮೦-೨೬೭೧೧೧೬೦, ೨೬೭೧೨೭೮೯ ಇಮೇಲ್: ಞsಣಚಿ.goಞ@gmಚಿiಟ.ಛಿom ವಿಳಾಸಕ್ಕೆ ಕಳುಹಿಸಿ ನೋಂದಾಯಿಸಬಹುದು. 
ಸಮ್ಮೇಳನದಲ್ಲಿ ಭಾಗವಹಿಸಲು ನೋಂದಣಿ ಶುಲ್ಕವಿರುವುದಿಲ್ಲವಾದರೂ ಮೊದಲು ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುವುದು. ಪ್ರಯಾಣ, ವಸತಿ ಹಾಗೂ ಇನ್ನಿತರ ಏರ್ಪಾಡುಗಳನ್ನು ಪ್ರತಿನಿಧಿಗಳು ತಾವೇ ಮಾಡಿಕೊಳ್ಳಬೇಕಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಹೆಚ್. ಹೊನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top