PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ನ.   ಯಾವುದೇ ಸ್ಪರ್ಧೆಯಿರಲಿ ಯುವ ಜನಾಂಗಕ್ಕೆ ಸ್ಪರ್ಧಾ ಮನೋಭಾವನೆ ಮುಖ್ಯ. ಸೋಲು-ಗೆಲುವು ಮುಖ್ಯವಲ್ಲ ನಮ್ಮ ದೇಶಿಯ ಸಂಸ್ಕೃತಿಯ ಬಗ್ಗೆ ಯುವ ಜನತೆಯು ಹೆಚ್ಚಿನ ಒಲವು ತೋರುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎನ್.ಬಿಲ್ಗಾರ್ ಅಭಿಪ್ರಾಯಪಟ್ಟರು.

ಅವರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರ ಆಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಜರುಗಿದ         ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಯಾವುದೇ ಸ್ಪರ್ಧಾಳುಗಳು ಮೊದಲು ಸ್ಪರ್ಧಾ ಮನೋಭಾವನೆಯಿಂದ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರುವ ನಿಟ್ಟಿನಲ್ಲಿ ಕಲಾವಿದರು ಶ್ರಮಿಸಲು ಕರೆ ನೀಡಿದ ಅವರು, ಕಲಾವಿದರಿಗಾಗಿ ಇಲಾಖೆ ಹಮ್ಮಿಕೊಂಡ ಕಾರ್ಯಕ್ರಮವನ್ನು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳುವಂತೆ ಮನವಿ ಮಾಡಿದರು. 
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್.ಕಾಕನೂರು ಮಾತನಾಡಿ ಯುವಕರಲ್ಲಿನ ಸೂಪ್ತ ಕಲೆಯನ್ನು ಗುರುತಿಸಲು ಇದು ಒಂದು ಉತ್ತಮ ವೇದಿಕೆಯಾಗಿದೆ. ಆದರೆ ಯುವಕರು ಕಲೆಯ ಬಗ್ಗೆ ಆಸಕ್ತಿ ತೋರದಿರುವುದು ಕಂಡು ಬರುತ್ತಿದೆ. ಪ್ರತಿಯೊಬ್ಬರಲ್ಲೂ ಒಂದೊಂದು ಅಭಿರುಚಿ ಅಡಗಿರುತ್ತದೆ. ಇಂತಹ ಪ್ರತಿಭೆಯನ್ನು ಪರಿಚಯಿಸಲು ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು. ಇದರಿಂದ ಯುವಕರಲ್ಲಿನ ನೈತಿಕ ಶಕ್ತಿಯಿಂದ ಯುವಕರಿಗೆ ಹೆಚ್ಚಿನ ಅವಕಾಶ ದೊರೆಯುತ್ತದೆ.  ಇಂದಿನ ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇಂತಹ ವೇದಿಕೆಯ ಸದುಪಯೋಗವನ್ನು ಸೂಕ್ತ ರೀತಿಯಲ್ಲಿ ಪಡೆದುಕೊಂಡು ಮುಂದೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದು ಆಶಿಸಿದರು. 
ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಅಮರೇಶ ಉಪಲಾಪುರ ಮಾತನಾಡಿ, ಇಂದಿನ ಯುವ ಜನಾಂಗದಲ್ಲಿ ಕಲೆಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವುದು ಅಷ್ಟೊಂದು ಒಳ್ಳೆಯ ವಿಷಯವಲ್ಲ. ಗ್ರಾಮೀಣ ಭಾಗದಲ್ಲಿನ ಕಲೆಯನ್ನು ಮುಖ್ಯವಾಹಿನಿಗೆ ತರುವ ಕೆಲಸ ಸರ್ಕಾರದಿಂದ ಆಗಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭೆಗಳನ್ನು ಪರಿಚಯಿಸಲು ಇಲಾಖೆಯ ಇಂತಹ ವೇದಿಕೆ ಸೂಕ್ತವಾಗಿದ್ದು ಇದರ ಲಾಭವನ್ನು ಪಡೆದು ಯುವ ಜನಾಂಗ ರಾಜ್ಯ ಮತ್ತು ರಾಷ್ಟ್ರಮಟ್ಟದ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆ ಸದಸ್ಯ ವಿರುಪಾಕ್ಷಪ್ಪ ಮೋರನಾಳ ವಹಿಸಿ ಮಾತನಾಡಿದರು. ವೇದಿಕೆ ಮೇಲೆ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೃಷ್ಣಮೂರ್ತಿ, ಕ್ರೀಡಾ ವಸತಿ ಶಾಲೆ ಅಧೀಕ್ಷಕ ಕೆ.ಉಸ್ಮಾನ್ ಬೇಗ್, ತರಬೇತುದಾರರಾದ ಸಿ.ಎ.ಪಾಟೀಲ್, ಎ.ಯತಿರಾಜು, ಯಲಬುರ್ಗಾ ತಾಲೂಕಿನ ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಬಸವರಾಜ ಅಡಿವೆಪ್ಪನವರ, ರಾಜ್ಯ ಯುವ ಪ್ರಶಸ್ತಿ ವಿಜೇತರಾದ ಶರಣಪ್ಪ ವಡಿಗೇರಿ, ಶ್ರೀನಿವಾಸ ಕಂಟಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಲಾಸ್ ಎನ್.ಘಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಎನ್.ಎಸ್.ಪಾಟೀಲ್ ಕಾರ್ಯಕ್ರಮ ನಿರ್ವಹಿಸಿ ಕೊನೆಯಲ್ಲಿ ವಂದಿಸಿದರು.

Advertisement

0 comments:

Post a Comment

 
Top