ಕೊಪ್ಪಳ : ಜನಸಾಮಾನ್ಯರ ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಲು ಸರ್ಕಾರ ಜಾರಿಗೆ ತಂದಿರುವ ಜನಸ್ಪಂದನ ಸಭೆ ಸಹಕಾರಿಯಾಗಿದೆ ಎಂದು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಹೇಳಿದರು.
ತಾಲೂಕಿನ ಬಿಕನಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಮಾಸಿಕ ಜನಸ್ಪಂದನಾ ಸಭೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಹಾಗೂ ಅವರ ಮನೆಬಾಗಿಲಿಗೆ ಸರ್ಕಾರಿ ಸವಲತ್ತುಗಳನ್ನು ತಲುಪಿಸಲು ಜಾರಿಗೊಂಡಿರುವ ಜನಸ್ಪಂದನ ಸಭೆ, ಅರ್ಹ ಫಲಾನುಭವಿಗಳಿಗೆ ವರವಾಗಿ ಪರಿಣಮಿಸಿದೆ ಎಂದು ಹೇಳಿದ ಅವರು ಜನರು ತಮ್ಮ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸಿಕೊಳ್ಳಲು ಇದು ಸಹಾಯಕಾರಿಯಾಗಿದೆ. ಎಲ್ಲ ಅಧಿಕಾರಿಗಳು ಗ್ರಾಮಗಳಿಗೆ ಆಗಮಿಸಿ, ಜನರ ಸಮಸ್ಯೆಗಳು, ಕುಂದುಕೊರತೆ ಅಹವಾಲುಗಳನ್ನು ಆಲಿಸಿ, ಸಣ್ಣ ಪುಟ್ಟ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಬಹುದಾಗಿದೆ ಎಂದು ಹೇಳಿದರು. ಗ್ರಾಮದ ಜಲ್ವವಂತ ಸಮಸ್ಯೆಗಳನ್ನು ನಾವೇ ನಿರ್ಮಾಣ ಮಾಡಿಕೊಳ್ಳುತ್ತಿದ್ದು ಅಂತ ಸಮಸ್ಯೆಗಳಿಗೆ ಗ್ರಾಮದ ಹಿರಿಯರು ಒಟ್ಟುಗೂಡಿ ಸಮಸ್ಯೆಗಳನ್ನು ಚರ್ಚಿಸುವುದರ ಮೂಲಕ ನಮ್ಮ ನಮ್ಮ ಸಮಸ್ಸೆಗಳನ್ನು ನಾವೆ ಬಗೆಹರಿಸಿಕೊಳ್ಳುವಲ್ಲಿ ಶ್ರಮಿಸಬೇಕು. ಅದರಂತೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧ್ಯಕ್ಷ ಮತ್ತು ಅಧಿಕಾರಿಗಳು ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ಸಮಸ್ಯೆಗಳನ್ನು ಬಗೆ ಹರಿಸಿಕೊಂಡಾಗ ಗ್ರಾಮದ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು. ಗ್ರಾಮದಲ್ಲಿ ಕೊಳಚೆ ನೀರು ಸಾಗಿಸವುದು. ಶುದ್ದ ಕುಡಿಯುವ ನೀರು. ರಸ್ತೆಗಳ ಬಗ್ಗೆ ಈಗಾಗಲೇ ಚರ್ಚಿಸಲಾಗಿದ್ದು ಇನ್ನೂ ಕೆಲವೇ ತಿಂಗಳೋಳಗಾಗಿ ಗ್ರಾಮದ ಅಭಿವೃದ್ದಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಸರಕಾರ ಯೋಜನೆಯ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂಬ ಸರ್ಕಾರದ ಆಶಯ ಜನಸ್ಪಂದನ ಸಭೆಗಳಿಂದ ಈಡೇರಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಸಂಗಣ್ಣ ಕರಡಿ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಲಕ್ಷ್ಮವ್ವಗಂಡಾಳಿ ವಹಿಸಿದ್ದರು. ಈ ಸಂದರ್ಭದಲ್ಲಿ ಸುಮಾರು ೨೨ ಕ್ಕೂ ಹೆಚ್ಚು ಭಾಗ್ಯಲಕ್ಷ್ಮಿ ಬಾಂಡಗಳನ್ನು ವಿತರಿಸಲಾಯಿತು.
ಜನಸ್ಪಂದನ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸುಮಾರು ೧೦ ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಿದ್ದವು, ಇವುಗಳಲ್ಲಿ ಗಂಗಾ ಕಲ್ಯಾಣ ಯೋಜನೆ, ವಿದ್ಯುತ್ ಪರಿವರ್ತಕಗಳ ಬದಲಾವಣೆ, ಬಿ.ಪಿ.ಎಲ್. ಕಾರ್ಡ್, ಬೆಳೆ ವಿಮೆ, ಗ್ರಾಮದ ಅಭಿವೃದ್ದಿ, ರಸ್ತೆಗಳು, ಆಶ್ರಯ ಮನೆಗಳು ಮುಂತಾದ ಸೌಲಭ್ಯಗಳ ಕುರಿತು ಸಲ್ಲಿಕೆಯಾಗಿದ್ದವು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಭಾಗೀರತಿ ಮಾಲಿಪಾಟೀಲ್, ಗ್ರಾಮ ಪಂಚಾಯತ್ ಸದಸ್ಯರಾದ ಸುರೆಶರಡ್ಡಿ ಬೆಳವಿನಾಳ, ಕುಬೇರಗೌಡ ಪೊಲೀಸ್ ಪಾಟೀಲ್, ತಹಶೀಲ್ದಾರ ಬಿ.ಎಲ್.ಘೋಟೆ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ. ಕೃಷ್ಣಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
0 comments:
Post a Comment