- ‘ಡಿವಿ ಗೆಲ್ಲಬೇಕಾದಲ್ಲಿ ನನ್ನ ಬೇಡಿಕೆ ಮನ್ನಿಸಿ’
ಬೆಂಗಳೂರು, : ರಾಜ್ಯದ ಅಧಿಕಾರದ ಚುಕ್ಕಾಣಿಯನ್ನು ಮತ್ತೊಮ್ಮೆ ಹಿಡಿಯಲು ಹರಸಾಹಸ ಪಡುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ಸಂಬಂಧ ಹೊಸದಿಲ್ಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ. ತನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ಮಾಡಿದಲ್ಲಿ ಡಿವಿಯನ್ನು ಗೆಲ್ಲಿಸಲು ತಂತ್ರ ರೂಪಿಸುವೆ ಎಂದೂ ಅವರು ವರಿಷ್ಠರಲ್ಲಿ ತಿಳಿಸಿದ್ದಾರೆನ್ನಲಾಗಿದೆ. ಒಂದೋ ಮುಖ್ಯಮಂತ್ರಿ ಪದವಿ ಇಲ್ಲವೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ದಕ್ಕಲೇ ಬೇಕು ಎಂದು ಮತ್ತೆ ಯಡಿಯೂರಪ್ಪ ಕಾರ್ಯಾ ಚರಣೆಗಿಳಿದಿದ್ದಾರೆ. ಆದರೆ ಈವರೆಗೂ ಯಡಿಯೂರಪ್ಪನವರ ಬೇಡಿಕೆಗೆ ವರಿಷ್ಠರು ಸ್ಪಂದಿಸಿಲ್ಲ. ತನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿ ದಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರು ವಂತೆ ಮಾಡುವೆ ಎಂದು ಅವರು ವರಿಷ್ಠರಲ್ಲಿ ತೋಡಿಕೊಂಡಿದ್ದಾರೆನ್ನಲಾಗಿದೆ.
ಈ ಸಂಬಂಧ ಗುರುವಾರ ಬಿಜೆಪಿಯ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿಯವರನ್ನು ಭೇಟಿ ಮಾಡಿ ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಭೂ ಹಗರಣಗಳ ಸುಳಿಯಲ್ಲಿ ಸಿಲುಕಿ ಜೈಲು ಪಾಲಾಗಿದ್ದ ಯಡಿಯೂರಪ್ಪ, ನ್ಯಾಯಾಲಯ ದಿಂದ ಜಾಮೀನಿನ ಮೇಲೆ ಹೊರ ಬಂದ ಬಳಿಕ ಶತಾಯ ಗತಾಯ ಮುಖ್ಯಮಂತ್ರಿ ಅಥವಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವರಿಷ್ಠರ ಮನವೊಲಿಕೆಗಾಗಿ ಅವರು ಹೊಸದಿಲ್ಲಿಯಲ್ಲಿ ಬೀಡುಬಿಟ್ಟಿದ್ದಾರೆ.
ರಾಜ್ಯದಲ್ಲಿ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಪರ್ಧಿಸಿರುವ ಬೆನ್ನಲ್ಲೇ ಯಡಿಯೂರಪ್ಪ ಹೊಸದಿಲ್ಲಿ ಪ್ರವಾಸ ಕೈಗೊಂಡಿರುವುದು, ರಾಜ್ಯ ರಾಜಕೀಯ ಹಾಗೂ ಬಿಜೆಪಿ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಎರಡು ದಿನಗಳಿಂದ ಹೊಸದಿಲ್ಲಿಯಲ್ಲಿ ಬೀಡು ಬಿಟ್ಟಿರುವ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ, ಲೋಕಸಭೆಯ ವಿಪಕ್ಷ ನಾಯಕಿ ಸುಶ್ಮಾ ಸ್ವರಾಜ್, ಬಿಜೆಪಿ ಹಿರಿಯ ಮುಖಂಡರಾದ ರಾಜ್‌ನಾಥ್ ಸಿಂಗ್, ಅರುಣ್ ಜೇಟ್ಲಿ, ವೆಂಕಯ್ಯನಾಯ್ಡು ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಸದ್ಯಕ್ಕೆ ಸದಾನಂದ ಗೌಡರ ಗೆಲುವಿಗೆ ಶ್ರಮಿಸುವಂತೆ ವರಿಷ್ಠರು ಯಡಿಯೂರಪ್ಪನವರಿಗೆ ನಿರ್ದೇಶನ ನೀಡಿದ್ದಾರೆ. ತನಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದಲ್ಲಿ ಸದಾನಂದರ ಗೆಲುವಿಗೆ ಪೂರ್ಣ ವಾಗಿ ತಂತ್ರ ರೂಪಿಸುತ್ತೇನೆ ಎಂದೂ ಅವರು ಭರವಸೆ ನೀಡಿದ್ದಾರೆ. ಸದಾನಂದ ಗೌಡ ಮುಖ್ಯಮಂತ್ರಿಯಾಗಿ ಮುಂದುವರಿಯ ಬೇಕಾದಲ್ಲಿ ತನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಗಲೇಬೇಕು ಎಂದು ಯಡಿಯೂರಪ್ಪ ಹಟ ಹಿಡಿದಿದ್ದಾರೆನ್ನಲಾಗಿದೆ.
0 comments:
Post a Comment