PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಡಿ. ಕೊಪ್ಪಳ ಜಿಲ್ಲೆಯಾದ್ಯಂತ ಕೌಡೆಪೀರ ಹಬ್ಬ ಆಚರಿಸುತ್ತಿರುವ ಪ್ರಯುಕ್ತ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕುಷ್ಟಗಿ ಮತ್ತು ಗಂಗಾವತಿ ನಗರದಲ್ಲಿ ಮದ್ಯಪಾನ, ಮದ್ಯ ಮಾರಾಟ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೌಡೆಪೀರ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಹಾಗೂ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಡಿ. ೧೪ ರಂದು ಬೆಳಿಗ್ಗೆ ೬ ಗಂಟೆಯಿಂದ ಡಿ. ೧೬ ರಂದು ಬೆಳಿಗ್ಗೆ ೦೬ ಗಂಟೆಯವರೆಗೆ ಕುಷ್ಟಗಿ ಪಟ್ಟಣ ಮತ್ತು ಗಂಗಾವತಿ ನಗರದಲ್ಲಿ ಮಾತ್ರ ಮದ್ಯಪಾನ, ಮದ್ಯ ಮಾರಾಟ ನಿಷೇಧಿಸಲಾಗಿದೆ.  ಇದರನ್ವಯ ನಿಷೇಧಿತ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ವೈನ್‌ಶಾಪ್, ಬಾರ್‌ಗಳು, ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟವನ್ನು ನಿಬಂಧಿಸಲಾಗಿದೆ. ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರಿಗೆ ಕಾರ್ಯನಿರ್ವಹಿಸಲು ಆದೇಶಿಸಿದೆ, ನಿಷೇಧಾಜ್ಞೆಯನ್ನು ನಿರ್ಲಕ್ಷಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ  ತಿಳಿಸಿದ್ದಾರೆ.

Advertisement

0 comments:

Post a Comment

 
Top