ಕೊಪ್ಪಳ ಡಿ. ೧೪ (ಕ.ವಾ): ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ಹುದ್ದೆಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಡಿ. ೧೮ ರಂದು ಸ್ಪರ್ಧಾತ್ಮಕ ಪರೀಕ್ಷೆ ಆಯೋಜಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶ ಹೊರಡಿಸಿದ್ದಾರೆ.
ಪಿಡಿಓ ಸ್ಪರ್ಧಾತ್ಮಕ ಪರೀಕ್ಷೆ ಕೊಪ್ಪಳದ ೧೭ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಗಮ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ೨೦೦ ಮೀ. ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ೧೯೮೩ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಪರೀಕ್ಷಾ ಕೇಂದ್ರ ಸುತ್ತ ಡಿ. ೧೮ ರಂದು ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರ ಸುತ್ತ ವ್ಯಾಪ್ತಿಯಲ್ಲಿ ಯಾವುದೇ ಎಸ್.ಟಿ.ಡಿ., ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ಅಲ್ಲದೆ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದ್ದು, ಈ ಆದೇಶ ಮದುವೆ, ಶವ ಸಂಸ್ಕಾರ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
0 comments:
Post a Comment