koppal ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಉತ್ತೇಜನ ನೀಡಲು ಸರ್ಕಾರ ಕೊಪ್ಪಳ ಜಿಲ್ಲೆಗೆ ೮. ೬೮ ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು ಮಂಜೂರು ಮಾಡಿದ್ದು, ಈಗಾಗಲೆ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಪ್ರೋತ್ಸಾಹಧನದ ಚೆಕ್‌ಗಳನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಕಳುಹಿಸಲಾಗಿದೆ ಎಂದು ಬಿ.ಸಿ.ಎಂ. ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸೂಚನೆಯಂತೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಉತ್ತೇಜನ ನೀಡಲು ಪ್ರೋತ್ಸಾಹಧನ ಮಂಜೂರಾತಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿ, ಮೆರಿಟ್ ಆಧರಿಸಿ ಪಾರದರ್ಶಕವಾಗಿ ಪಟ್ಟಿ ತಯಾರಿಸಲಾಗಿದೆ. ಒಟ್ಟು ಸ್ವೀಕರಿಸಲಾದ ೫೬೮ ಅರ್ಜಿಗಳಲ್ಲಿ ಮೆರಿಟ್ ಆಧರಿಸಿ ಒಟ್ಟು ೨೧೬ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಪಿ.ಯು.ಸಿ. ವಿದ್ಯಾರ್ಥಿಗಳಿಗೆ ರೂ. ೩೦೦೦, ಪದವಿ ವಿದ್ಯಾರ್ಥಿಗಳಿಗೆ ರೂ. ೪೦೦೦ ಮತ್ತು ಸ್ನಾತಕ ಪದವಿ ವಿದ್ಯಾರ್ಥಿಗಳಿಗೆ ರೂ. ೫೦೦೦ ರಂತೆ ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ. ಈಗಾಗಲೆ ಆಯ್ಕೆಯಾಗಿರುವ ವಿದ್ಯಾರ್ಥಿಗಳ ಹೆಸರಿಗೆ ಚೆಕ್ ಬರೆದು ಒಟ್ಟು ೬೨ ಕಾಲೇಜುಗಳಿಗೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಚೆಕ್ ಪಡೆದುಕೊಳ್ಳಬೇಕು. ಏನೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ತಿಳಿಸಿದೆ.
0 comments:
Post a Comment