PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಡಿ.: ಗಂಗಾವತಿಯಲ್ಲಿ ನಡೆಯಲಿರುವ ೭೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶ ಹೊರಡಿಸಿದ್ದಾರೆ.
೭೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಭಾಗಗಳಿಂದ ಸಾಹಿತಿಗಳು, ಕಲಾವಿದರು, ಗಣ್ಯಾತಿಗಣ್ಯ ವ್ಯಕ್ತಿಗಳು, ರಾಜಕೀಯ ಮುಖಂಡರು, ಸಾರ್ವಜನಿಕರು ಮುಂತಾದವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ತಾಲೂಕಿನ ಸರ್ಕಾರಿ ಶಾಲಾ/ಕಾಲೇಜುಗಳ ಶಿಕ್ಷಕರು/ಉಪನ್ಯಾಸಕರುಗಳನ್ನು ಸಮ್ಮೇಳನದಲ್ಲಿ ವಿವಿಧ ಕಾರ್ಯಗಳಿಗಾಗಿ ನಿಯೋಜಿಸಲಾಗಿದೆ. ಶಾಲಾ /ಕಾಲೇಜು ಕಟ್ಟಡಗಳನ್ನು ವಸತಿ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಅಲ್ಲದೇ ಎಲ್ಲಾ ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲಾ/ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಗಂಗಾವತಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಡಿ. ೦೮ ರಿಂದ ೧೧ ರವರೆಗೆ ಹಾಗೂ ಉಳಿದ ೩ ತಾಲೂಕುಗಳ ಎಲ್ಲಾ ಶಾಲಾ ಕಾಲೇಜುಗಳಿಗೆ ಡಿ. ೦೯ ರಿಂದ ೧೧ ರವರೆಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top