koppal : ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ೪೦ ಮೈಕ್ರಾನ್‌ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ಅಶ್ವಿನಿ ಬಿ.ಎಂ. ಅವರು ತಿಳಿಸಿದ್ದಾರೆ.
ಈಗಾಗಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ೪೦ ಮೈಕ್ರಾನ್‌ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ನಿಷೇಧಿಸಿವೆ. ಅಲ್ಲದೆ ಕಳೆದ ಅಕ್ಟೋಬರ್ ತಿಂಗಳಲ್ಲಿ ನಡೆದ ಕೊಪ್ಪಳ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಸಂಬಂಧಪಟ್ಟಂತೆ ತೀರ್ಮಾನ ಕೈಗೊಳ್ಳಲಾಗಿದೆ. ಅದರನ್ವಯ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ೪೦ ಮೈಕ್ರಾನ್‌ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ಅನ್ನು ಸಾರ್ವಜನಿಕರು ಉಪಯೋಗಿಸುವಂತಿಲ್ಲ. ಅಲ್ಲದೆ ಮಾರಾಟಗಾರರೂ ಸಹ ಅಂತಹ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದಲ್ಲಿ, ಸಗಟು ಮಾರಾಟಗಾರರಿಗೆ ರೂ. ೫೦೦೦ ಹಾಗೂ ಕಿರಾಣಿ ಮತ್ತು ಇನ್ನಿತರ ಅಂಗಡಿಗೆ ರೂ. ೫೦೦ ಗಳ ದಂಡ ವಿಧಿಸಲಾಗುವುದು. ಸಾರ್ವಜನಿಕರು ಮತ್ತು ವರ್ತಕರು ಪ್ಲಾಸ್ಟಿಕ್ ನಿಷೇಧಕ್ಕೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತೆ ಅಶ್ವಿನಿ ಬಿ.ಎಂ. ತಿಳಿಸಿದ್ದಾರೆ
0 comments:
Post a Comment