PLEASE LOGIN TO KANNADANET.COM FOR REGULAR NEWS-UPDATES


ಗವಿಸಿದ್ದೇಶ್ವರ ಜಾತ್ರೆ :
  ಕೃಷಿ ಇಲಾಖೆಯು ಜಿಲ್ಲಾ ಪಂಚಾಯತಿಯ ಸಹಯೋಗದೊಂದಿಗೆ ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ಜ. ೧೧ ರಿಂದ ೧೩ ರವರೆಗೆ ನಗರದ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆ ಮೈದಾನದಲ್ಲಿ ವಿಶೇಷ ಕೃಷಿ ವಸ್ತುಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಸ್ತುಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮ ಜ. ೧೧ ರಂದು ನಡೆಯಲಿದೆ.
  ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಕೃಷಿ ಕ್ಷೇತ್ರದಲ್ಲಿನ ಹೊಸ ಹೊಸ ಆವಿಷ್ಕಾರ ಹಾಗೂ ಆಧುನಿಕ ಸಲಕರಣೆಗಳು ಸೇರಿದಂತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವ ಉದ್ದೇಶದಿಂದ ವಿಶೇಷ ಕೃಷಿ ವಸ್ತುಪ್ರದರ್ಶನವನ್ನು ಜ. ೧೧ ರಿಂದ ೧೩ ರವರೆಗೆ ಮೂರು ದಿನಗಳ ಕಾಲ ನಗರದ ಗವಿಸಿದ್ದೇಶ್ವರ ಪ್ರೌಢಶಾಲೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.  ವಸ್ತುಪ್ರದರ್ಶನದ ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ನೆರವೇರಿಸುವರು.  ಕೊಪ್ಪಳ ಶ್ರೀ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು.  ಶಾಸಕ ಸಂಗಣ್ಣ ಕರಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ (ವಿಧಾನಪರಿಷತ್) ಶಶಿಲ್ ಜಿ. ನಮೋಶಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿ.ಪಂ. ಉಪಾಧ್ಯಕ್ಷೆ ಸೀತಾ ಹಲಗೇರಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ತಾ.ಪಂ. ಅಧ್ಯಕ್ಷ ಅಮರೇಶ್ ಉಪಲಾಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜ್ಯ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಎನ್. ಮಂಜುನಾಥ ಪ್ರಸಾದ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಜಂಟಿಕೃಷಿ ನಿರ್ದೇಶಕ ಬಾಲರೆಡ್ಡಿ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top