ಕೊಪ್ಪಳ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳ ಮೂಲಕ ಕಡಿಮೆ ದರದಲ್ಲಿ ಈರುಳ್ಳಿಯನ್ನು ಪಡಿತರ ಚೀಟಿದಾರರಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಲಾಗುತ್ತಿದ್ದು, ಯಾವುದೇ ರೀತಿಯ ಪಡಿತರ ಚೀಟಿದಾರರು ಅಲ್ಲದೆ ಸಾರ್ವಜನಿಕರು ಸಹ ಈರುಳ್ಳಿಯನ್ನು ಖರೀದಿಸುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಲಾಗಿರುವ ಈರುಳ್ಳಿಯನ್ನು ಜಿಲ್ಲೆಯ ಎಲ್ಲಾ ಗ್ರಾಮಾಂತರ ಮತ್ತು ನಗರ ಪ್ರದೇಶದ ನ್ಯಾಯಬೆಲೆ ಅಂಗಡಿಗಳ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಗ್ರೇಡ್-೧ ಈರುಳ್ಳಿಯನ್ನು ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ರೂ. ೭೬೦ ರಂತೆ ರೈತರಿಂದ ಸರ್ಕಾರ ಖರೀದಿಸಿದ್ದು, ಈರುಳ್ಳಿಯನ್ನು ಪ್ರತಿ ಕೆ.ಜಿ. ಗೆ ರೂ. ೩ ರಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಾಗಲಿದೆ. ಅದೇ ರೀತಿ ಪ್ರತಿ ಕ್ವಿಂ. ಗೆ ರೂ. ೫೬೦ ರಂತೆ ಖರೀದಿಸಲಾದ ಗ್ರೇಡ್-೨ ಈರುಳ್ಳಿಯನ್ನು ಪ್ರತಿ ಕೆ.ಜಿ.ಗೆ ರೂ. ೨ ರಂತೆ ಹಾಗೂ ಪ್ರತಿ ಕ್ವಿಂ. ಗೆ ರೂ. ೩೬೦ ರಂತೆ ಖರೀದಿಸಲಾದ ಗ್ರೇಡ್-೩ ಈರುಳ್ಳಿಯನ್ನು ಪ್ರತಿ ಕೆ.ಜಿ.ಗೆ ಕೇವಲ ರೂ. ೧ ರಂತೆ ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ ಈರುಳ್ಳಿ ಬೆಲೆ ಕುಸಿತದಿಂದಾಗಿ ಬೆಂಬಲ ಬೆಲೆಯಲ್ಲಿ ರೈತರಿಂದ ಸರ್ಕಾರ ಈರುಳ್ಳಿ ಖರೀದಿಸಿದ್ದು, ಖರೀದಿಸಿದ ಈರುಳ್ಳಿಯನ್ನು ಶೀಘ್ರ ವಿಲೇವಾರಿ ಮಾಡಲು ಸಾರ್ವಜನಿಕ ವಿತರಣಾ ಪದ್ಧತಿಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು ಅಷ್ಟೇ ಅಲ್ಲದೆ ಸಾರ್ವಜನಿಕರೂ ಸಹ ನ್ಯಾಯಬೆಲೆ ಅಂಗಡಿಗಳಿಂದ ಈರುಳ್ಳಿ ಖರೀದಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಮನವಿ ಮಾಡಿಕೊಂಡಿದ್ದಾರೆ.
0 comments:
Post a Comment