- ಲಲಿತಾರಾಣಿ ಶ್ರೀರಂಗದೇವರಾಯಲು
ಮಹಿಳೆಯರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು, ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು ಅವರು ಮಹಿಳೆಯರಲ್ಲಿ ಕರೆ ನೀಡಿದರು.
ಕರ್ನಾಟಕ ರಾಜ್ಯ ಮಹಿಳಾ ಅಬಿವೃದ್ಧಿ ನಿಗಮದ ವತಿಯಿಂದ ನಗರದ ಶ್ರೀ ಗವಿಸಿದ್ದೇಶ್ವರ ಜಾತ್ರೆ ಮೈದಾನದಲ್ಲಿ ಏರ್ಪಡಿಸಲಾಗಿರುವ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕೊಪ್ಪಳ ಭೂ-ನ್ಯಾಯ ಮಂಡಳಿ ಸದಸ್ಯ ಹಾಲೇಶ್ ಕಂದಾರಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ವಸ್ತುಪ್ರದರ್ಶನದಲ್ಲಿ ಇರಿಸಲಾಗಿರುವ ವಸ್ತುಗಳು ಉತ್ತಮ ಗುಣಮಟ್ಟ ಹೊಂದಿದ್ದು, ಮುಂದೆಯೂ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ ಸ್ವ-ಸಹಾಯ ಗುಂಪುಗಳಿಗೆ ಸಹಕಾರ ನೀಡಬೇಕು ಎಂದು ನುಡಿದರು.
ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಬಿ.ಇ. ಹೇಮರೆಡ್ಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಸುಧಾ ಮಂಜುನಾಥ, ನಿಗಮದ ಯೋಜನಾ ಅನುಷ್ಠಾನಾಧಿಕಾರಿ ದಾದೇಸಾಹೇಬ ಹಿರೇಮನಿ ಮುಂತಾದವರು ಭಾಗವಹಿಸಿದ್ದರು.
0 comments:
Post a Comment