PLEASE LOGIN TO KANNADANET.COM FOR REGULAR NEWS-UPDATES


  ಜನನ-ಮರಣ ನೋಂದಣಿ ಹಾಗೂ ಪ್ರಮಾಣ ಪತ್ರವನ್ನು ವಿತರಿಸುವ ಕುರಿತಂತೆ ಎಲ್ಲ ವೈದ್ಯಾಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜ. ೨೧ ರಂದು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
        ಸರ್ವೋಚ್ಛ ನ್ಯಾಯಾಲಯದ ಸೂಚನೆಯಂತೆ ಸಾರ್ವಜನಿಕರಿಗೆ ಸುಲಭವಾಗಿ ಜನನ-ಮರಣ ಪ್ರಮಾಣ ಪತ್ರವನ್ನು ವಿತರಿಸಲು ಅನುಕೂಲವಾಗುವಂತೆ ಜಿಲ್ಲಾಸ್ಪತ್ರೆಯೂ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕಾ, ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಜನನ-ಮರಣ ಉಪನೊಂದಣಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ.  ಇಂತಹ ಉಪನೋಂದಣಿ ಕೇಂದ್ರಗಳಲ್ಲಿ ಜನನ-ಮರಣ ನೋಂದಣಾಧಿಕಾರಿಯಾಗಿರುವ ಆಯಾ ಕೇಂದ್ರದ ವೈದ್ಯಾಧಿಕಾರಿಯವರಿಗೆ ಸೂಕ್ತ ತರಬೇತಿಯ ಅವಶ್ಯಕತೆ ಇದ್ದು, ಜ. ೨೧ ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.  ತರಬೇತಿಯನ್ನು ಬೆಂಗಳೂರಿನ ಪ್ಲಾನ್ ಇಂಡಿಯಾದ ದಕ್ಷಿಣ ಪ್ರಾಂತೀಯ ಸಹಯೋಜಕರಾದ ಡಾ. ಶುಭಾ ಅವರು ನಡೆಸಿಕೊಡುವರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಉಪನಿರ್ದೇಶಕ ಕೆ. ಜಯರಾಂ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹದೇವಸ್ವಾಮಿ ಭಾಗವಹಿಸುವರು.   ಈ ತರಬೇತಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರೂ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು, ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ತಪ್ಪದೆ ಹಾಜರಾಗುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top