PLEASE LOGIN TO KANNADANET.COM FOR REGULAR NEWS-UPDATES



ಕೊಪ್ಪಳ. ಜ. ೯: ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪತ್ರಕರ್ತರ ಪಾತ್ರವೂ ಬಹು ಮುಖ್ಯವಾಗಿದೆ ಎಂದು ಶಾಸಕ ಸಂಗಣ್ಣ ಕರಡಿ ಅವರು ಅಭಿಪ್ರಾಯಪಟ್ಟರು.
ಅವರು ರವಿವಾರ ಸಂಜೆ ನಗರದ ವಾರ್ತಾ ಭವನದಲ್ಲಿ ಆಯೋಜಿಸಲಾಗಿದ್ದ ನೂತನ ಅಧ್ಯಕ್ಷರ ಪದಗ್ರಹಣ, ಹಾಸ್ಯ ಸಂಜೆ ಹಾಗೂ ರಸಮಂಜರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಷ್ಟೆ ಪತ್ರಿಕಾರಂಗವೂ ದೇಶದ ನಾಲ್ಕನೆ ಅಂಗವಾಗಿ ಮಹತ್ತರ ಜವಾಬ್ದಾರಿ ನಿರ್ವಹಿಸುತ್ತಿದೆ. ಸದಾ ಒತ್ತಡದಲ್ಲಿಯೇ ತಮ್ಮ ಕಾರ್ಯವನ್ನು ನಿರ್ವಹಿಸುವ ಪತ್ರಕರ್ತರ ಮೇಲೆ ಸಾಮಾಜಿಕ ಹೊಣೆಗಾರಿಕೆ ಇದೆ ಎಂದರು.
ಸಾಮಾಜಿಕ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ಸಾಮಾಜಿಕ ಸ್ವಾಸ್ತ್ಯ ಕಾಪಾಡುವಲ್ಲಿ ವಿಫಲವಾದಾಗ ಪತ್ರಿಕಾರಂಗ ಈ ಮೂರು ಅಂಗಗಳಿಗಿಂತ ಭಿನ್ನವಾಗಿ ಸಾಮಾಜಿಕ ವ್ಯವಸ್ಥೆಯನ್ನು ತಿಳಿಗೊಳಿಸುತ್ತದೆ.
ಸಣ್ಣ ಪತ್ರಿಕೆ ಹಾಗೂ ಗ್ರಾಮೀಣ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಪತ್ರಕತರಿಗೆ ಬಹಳಷ್ಟು ಆರ್ಥಿಕವಾಗಿ ಸಂಕಷ್ಟದಲ್ಲಿರುತ್ತಾರೆ ಹಾಗೇ ಅವರ ಕೌಟುಂಬಿಕ ನಿರ್ವಹಣೆ ಕೂಡ ತುಸು ಕಷ್ಟವಾಗಬಹುದು ಎಂದ ಅವರು ಕೊಪ್ಪಳ ನಗರದ ಪತ್ರಕರ್ತರಿಗೆ ಅವರ ಬೇಡಿಕೆಗೆ ಅನುಸಾರವಾಗಿ ಶೀಘ್ರದಲ್ಲಿಯೇ ನಿವೇಶನವನ್ನು ಕೊಡುವುದಾಗಿ ಭರವಸೆ ನೀಡಿದರು.
ಮುಖ್ಯ ಅತಿಥಿಗಳಾಗಿ ಸಹಾಯಕ ಸರಕಾರಿ ಅಭಿಯೋಜಕ ಬಿ.ಎಸ್.ಪಾಟೀಲ್ ಮಾತನಾಡಿ, ಭಾರತೀಯ ಪತ್ರಿಕೋದ್ಯಮದ ಬಗ್ಗೆ ತಿಳಿಸಿದ ಅವರು, ಜಾಗತೀಕರಂಗದ ಪ್ರಭಾವದಿಂದ ಪತ್ರಿಕಾರಂಗ ಅದರಲ್ಲೂ ವಿಶೇಷವಾಗಿ ಮುದ್ರಣ ಮಾಧ್ಯಮ ತೀವ್ರ ಸಂಕಷ್ಟದಲ್ಲಿದೆ ಎಂದರು.
ಜೆಡಿಎಸ್ ಮುಖಂಡ ಕೆ.ಎಂ.ಸಯ್ಯದ ಮಾತನಾಡಿ, ಪತ್ರಕರ್ತರು ನೈಜ ಸುದ್ದಿಯನ್ನು ಸಮಾಜಕ್ಕೆ ನೀಡುವುದು ಒಳ್ಳೆಯದು ಆದರೆ ಇತ್ತೀಚಿನ ದಿನಗಳಲ್ಲಿ ಕೆಲ ಮಾಧ್ಯಮಗಳು ಕೆಲವರ ಓಲೈಕೆಗಾಗಿ ಊಹಾಪೋಹ ಸುದ್ದಿ ಮಾಡುತ್ತಿರುವುದು ವ್ಯಾಪಕವಾಗುತ್ತಿದೆ ಎಂದು ವಿಷಾಧಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟ ಪೂರ್ವ ಅಧ್ಯಕ್ಷ ಎಚ್.ಎಸ್.ಹರೀಶ ಅವರು ನೂತನ ಅಧ್ಯಕ್ಷ ನಾಗರಾಜ ಸುಣಗಾರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ನಂತರ ಜಾನಪದ ಕಲಾವಿದ ಜೀವನಸಾಬ ಬಿನ್ನಾಳ ಅವರಿಂದ ಹಾಸ್ಯ ಸಂಜೆ ಹಾಗೂ ಮಹಮ್ಮದ ರಫಿ ಮೆಲೋಡಿಸ್ ಅವರಿಂದ ರಸಮಂಜರಿ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಪ್ರದೀಪ್‌ಗೌಡ ಮಾಲಿಪಾಟೀಲ್, ನಗರಸಭೆ ಸದಸ್ಯರಾದ ಈರಣ್ಣ ಹಂಚಿನಾಳ, ಮಾನ್ವಿ ಪಾಷಾ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂ, ನಿವೃತ್ತ ವಾರ್ತಾಧಿಕಾರಿ ಬಸವರಾಜ ಆಕಳವಾಡಿ, ಬಿಜೆಪಿ ಮುಖಂಡ ಬಸವಲಿಂಗಪ್ಪ ಲಾಡಿ, ಮಂಜುನಾಥ ಗೊಂಡಬಾಳ, ಕರವೇ ಅಧ್ಯಕ್ಷ ಆರ್.ವಿಜಯಕುಮಾರ, ಹಿರಿಯ ಪತ್ರಕರ್ತ ಕೊಟ್ರಪ್ಪ ತೋಟದ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತವನ್ನು ಸಂಯುಕ್ತ ಕರ್ನಾಟಕ ಜಿಲ್ಲಾ ವರದಿಗಾರ ಬಸವರಾಜ ಬಿನ್ನಾಳ ನಿರ್ವಹಿಸಿದರೆ, ಪ್ರಾಸ್ತಾವಿಕವಾಗಿ ಪ್ರಧಾನ ಕಾರ್ಯದರ್ಶಿ ಎಂ.ಸಾದಿಕ ಅಲಿ ಅವರು ಮಾತನಾಡಿದರು. ಪತ್ರಕರ್ತ ಸಿದ್ದಪ್ಪ ಹಂಚಿನಾಳ ಅವರು ವಂದಿಸಿದರು. ಜಿಲ್ಲಾ ಕಾರ್ಯದರ್ಶಿ ಎನ್.ಎಂ.ದೊಡ್ಡಮನಿ ಕಾರ್ಯಕ್ರಮದ ನಿರೂಪಿಸಿದರು.





























Advertisement

0 comments:

Post a Comment

 
Top