PLEASE LOGIN TO KANNADANET.COM FOR REGULAR NEWS-UPDATES


 ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಜ. ೩೦ ರಂದು ಬೆಳಿಗ್ಗೆ ಎರಡು ನಿಮಿಷ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ.
  ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥ ಪ್ರತಿ ವರ್ಷ ಜನವರಿ ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ಎಲ್ಲಾ ಕೆಲಸ ಕಾರ್ಯಗಳನ್ನು ಹಾಗೂ ಚಲನೆಯನ್ನು ಸ್ಥಗಿತಗೊಳಿಸಿ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.  ಸರ್ಕಾರದ ಸೂಚನೆಯನ್ವಯ ಜ. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ಎಲ್ಲ ವಿದ್ಯಾಸಂಸ್ಥೆಗಳು, ವರ್ಕ್ ಶಾಪ್‌ಗಳು, ಕಾರ್ಖಾನೆಗಳಲ್ಲಿ ಕಾರ್ಯಕ್ರಮ ಜರುಗಿಸಬೇಕು.  ಕೆಲವು ಕಚೇರಿಗಳಲ್ಲಿ ೨ ನಿಮಿಷಗಳ ಮೌನ ಆಚರಣೆ ಮಾಡುತ್ತಿರುವಾಗ ಸಾಮಾನ್ಯ ಜನತೆ ಮೌನ ಆಚರಣೆ ಸಂದರ್ಭದ ಪಾವಿತ್ರ್ಯತೆಯನ್ನು ಗಮನದಲ್ಲಿ ಇಡದೆ, ತಮ್ಮ ಕಾರ್ಯದಲ್ಲಿ ನಿರತವಾಗುವುದನ್ನು ಗಮನಿಸಲಾಗಿದ್ದು, ಇದರಿಂದಾಗಿ ಹುತಾತ್ಮರ ದಿನಾಚರಣೆಗೆ ಸಲ್ಲಬೇಕಾದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಲಿದೆ.  ಹುತಾತ್ಮರ ಸ್ಮರಣೆ ಸಂದರ್ಭದಲ್ಲಿ ಸಾಮಾನ್ಯ ಜನತೆಯನ್ನೂ ಭಾಗವಹಿಸುವಂತೆ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಪ್ರಾಧಿಕಾರಗಳು ಕ್ರಮ ಕೈಗೊಳ್ಳಬೇಕು.  ವಿಶೇಷವಾಗಿ ವಿದ್ಯಾಸಂಸ್ಥೆಗಳಲ್ಲಿ ಭಾರತದ ಸ್ವಾತಂತ್ರ್ಯದಲ್ಲಿ, ಸ್ವಾತಂತ್ರ್ಯ ಹೋರಾಟಗಾರರ ಪಾತ್ರ ತಿಳಿಸುವಂತಹ ಭಾಷಣ, ಚರ್ಚೆಗಳನ್ನು ಏರ್ಪಡಿಸಬೇಕು.  ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯ ಉಳಿಸುವುದು, ಸಂರಕ್ಷಿಸುವುದು ಮತ್ತು ಶ್ರೀಮಂತಗೊಳಿಸುವುದಲ್ಲದೆ, ರಾಷ್ಟ್ರದ ಐಕ್ಯತೆಯನ್ನು ಉತ್ತೇಜಿಸುವುದು, ಆದರ್ಶಗಳಿಗೆ ಬದ್ಧರಾಗುವ ಅಂಶಗಳನ್ನೊಳಗೊಂಡಿರಬೇಕು ಎಂದು ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಜ್ಞಾಪನ ಹೊರಡಿಸಿದೆ.
ಜ. ೩೦ ರಂದು ಜಿಲ್ಲಾಡಳಿತ ಭವನದಲ್ಲಿ ಹುತಾತ್ಮರ ಸ್ಮರಣೆ
  ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ಜ. ೩೦ ರಂದು ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮ ಅಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.
  ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಅರ್ಪಿಸುವ ನಿಟ್ಟಿನಲ್ಲಿ ಜ. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ಆಡಿಟೋರಿಯಂ ಹಾಲ್‌ನಲ್ಲಿ ಎರಡು ನಿಮಿಷಗಳ ಮೌನ ಆಚರಿಸಲಾಗುವುದು.  ಎಲ್ಲಾ ಇಲಾಖಾ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top