: ಕ್ರಮಕ್ಕೆ ಸೂಚನೆ
ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಕೆಯಾಗುವ ಅರ್ಜಿಗಳನ್ನು ಆನ್‌ಲೈನ್ ಮೂಲಕ ವಿಲೇವಾರಿ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು, ವಿಲೇವಾರಿಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್ ಅವರು ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಯಾ ಇಲಾಖೆಗಳಿಂದ ಮಾಹಿತಿ ಪಡೆದು, ವಿಲೇವಾರಿಗೊಳಿಸಲು ನೂತನ ವೆಬ್‌ಸೈಟ್ ಪ್ರಾರಂಭಿಸಿ, ಆಯಾ ಇಲಾಖೆ ಅಧಿಕಾರಿಗಳಗೆ ವೆಬ್‌ಸೈಟ್ ಮೂಲಕವೇ ಅರ್ಜಿಯ ಪ್ರತಿ ಹಾಗೂ ಮಾಹಿತಿಯನ್ನು ಪಡೆಯುವ ವ್ಯವಸ್ಥೆಗೊಳಿಸಿದೆ. ಅಲ್ಲದೆ ಈ ಕುರಿತಂತೆ ಆಯಾ ಇಲಾಖೆ ಅಧಿಕಾರಿಗಳಿಗೆ ಮತ್ತು ಅರ್ಜಿದಾರರಿಗೆ ಎಸ್.ಎಂ.ಎಸ್. ಮೂಲಕ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ಈ ರೀತಿ ಕಳುಹಿಸಲಾಗುವ ಸಂದೇಶಗಳಿಗನುಗುಣವಾಗಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಸಾರ್ವಜನಿಕರ ಕುಂದುಕೊರತೆ ಅರ್ಜಿಗಳಿಗೆ ಸ್ಪಂದಿಸಿ, ಕೂಡಲೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಕುಂದುಕೊರತೆ ಅರ್ಜಿಗಳ ವಿಲೇವಾರಿ ಕುರಿತಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಫೆ. ೨೫ ರಂದು ಸಭೆಯಲ್ಲಿ ಪರಿಶೀಲನೆ ನಡೆಸುವರು. ಅರ್ಜಿಗಳ ವಿಲೇವಾರಿ ಕೈಗೊಳ್ಳುವಲ್ಲಿ ಅನಗತ್ಯ ವಿಳಂಬ ಹಾಗೂ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
0 comments:
Post a Comment