PLEASE LOGIN TO KANNADANET.COM FOR REGULAR NEWS-UPDATES

ರಾಜ್ಯದಲ್ಲಿನ ಒಟ್ಟು ಸಂಖ್ಯೆಯ ಅರ್ಧದಷ್ಟು ಮಹಿಳೆ ಮತ್ತು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ ಕುರಿತು ಚಿಂತಿಸದ ಜನ ಪ್ರತಿನಿಧಿಗಳು ಅಧಿಕಾರಕ್ಕಾಗಿ ಕಚ್ಚಾಡುತ್ತಿರುವುದು ನಾಚಿಕೆಗೇಡು ಎಂದು ಜಿಲ್ಲಾ ಬಾಲವಿಕಾಸ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜಮದಾರ ಆಕ್ರೋಶ ವ್ಯಕ್ತಪಡಿಸಿದರು. 
ನಗರದ ಸಾಹಿತ್ಯ ಭವನದಲ್ಲಿ ನಡೆದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದರು.
ರಾಜ್ಯದ ಸಮಸ್ಯೆಗಳ ಚರ್ಚೆಗೆ ವೇದಿಕೆಯಾಗಬೇಕಾದ ಸದನದಲ್ಲಿ ಹೆಣ್ಣನ್ನು ಅಶ್ಲೀಲವಾಗಿ ಕಾಣುವ ಸಚಿವರನ್ನು ಸಮರ್ಥಿಸಿಕೊಳ್ಳುವ ಮಾಜಿ ಸಿಎಂ ಕ್ರಮ ಖಂಡನಾರ್ಹ ಎಂದರು. ಬಾಲ್ಯ ವಿವಾಹ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಕಂಡುಬಂದಲ್ಲಿ ಸಂಸ್ಥೆಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವಿ ಮಾಡಿದರು. ಬಾಲವಿಕಾಸ ಅಕಾಡೆಮಿ ಯೋಜನಾಧಿಕಾರಿ ಎಸ್.ಮಾಲತಿ ಪೋಳ ಉದ್ಘಾಟಿಸಿ ಮಾತನಾಡಿ, ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಸ್ಥೈರ್ಯ ಅಗತ್ಯವಾದ್ದರಿಂದ ಅಕಾಡೆಮಿ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಜಶೇಖರ ಮುಳಗುಂದ ಅಧ್ಯಕ್ಷತೆ ವಹಿಸಿದ್ದರು. ಬಾಲವಿಕಾಸ ಅಕಾಡೆಮಿ ಸದಸ್ಯರಾದ ಶ್ರೀನಿವಾಸ, ಅರುಣಾ ನರೇಂದ್ರ ಪಾಟೀಲ್ ಸೇರಿದಂತೆ ಇತರರು ಇದ್ದರು. ಜಯಶ್ರೀ ನಿರೂಪಿಸಿದರು. ನಗರದ ನಾನಾ  ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.
೨೫ಎಫ್‌ಕೆಪಿಎಲ್೨ ಕೊಪ್ಪಳದ ಸಾಹಿತ್ಯ ಭವನದಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮ ಬಾಲವಿಕಾಸ ಅಕಾಡೆಮಿ ಯೋಜನಾಧಿಕಾರಿ ಎಸ್.ಮಾಲತಿ ಪೋಳ ಶನಿವಾರ ಉದ್ಘಾಟಿಸಿದರು. 
೨೫ಎಫ್‌ಕೆಪಿಎಲ್೩ಕೊಪ್ಪಳದ ಸಾಹಿತ್ಯ ಭವನದಲ್ಲಿ ರಾಜ್ಯ ಬಾಲವಿಕಾಸ ಅಕಾಡೆಮಿ ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಗಾಂಧಿ ಟೋಪಿ ಹಾಕಿಕೊಂಡು ಆಗಮಿಸಿದ್ದ ಇಲ್ಲಿನ ಜ್ಞಾನ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ಗಮನ ಸೆಳೆದರು. 

Advertisement

0 comments:

Post a Comment

 
Top