ಕೊಪ್ಪಳ ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ , ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ೨೦೧೨-೧೩ನೇ ಶೈಕ್ಷಣಿಕ ಸಾಲಿನ ೦೬ ನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಮಾ. ೦೮ ರವರೆಗೆ ವಿಸ್ತರಿಸಲಾಗಿದೆ.
ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಮಾ. ೨೫ ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಸಮೀಪಿಸಿದ್ದರು, ನಿರೀಕ್ಷಿತ ಪ್ರಮಾಣದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸದೇ ಇರುವುದು ಕಂಡುಬಂದಿದೆ. ಆದ್ದರಿಂದ ಅರ್ಹ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯಾ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಿಂದ ಅಥವಾ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳಿಂದ ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಚಾರ್ಯರಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು. ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಿರ್ವಹಣೆಯಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪೈಕಿ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್‌ನಲ್ಲಿನ ವಸತಿ ಶಾಲೆ ಹೊರತುಪಡಿಸಿ ಉಳಿದ ಎಲ್ಲಾ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅವಧಿ ವಿಸ್ತರಣೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಬಿಸಿಎಂ. ಅಧಿಕಾರಿ ಬಿ. ಕಲ್ಲೇಶ್ ಅವರು ತಿಳಿಸಿದ್ದಾರೆ.
0 comments:
Post a Comment