PLEASE LOGIN TO KANNADANET.COM FOR REGULAR NEWS-UPDATES


  ಜಿಲ್ಲಾ ಪಂಚಾಯತಿಯ ಇರಕಲ್ಲಗಡಾ ಕ್ಷೇತ್ರ ಉಪಚುನಾವಣೆ ಸಂಬಂಧ ಸಲ್ಲಿಕೆಯಾಗಿರುವ ಮೂವರೂ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ತಿಳಿಸಿದ್ದಾರೆ.
  ಫೆ. ೧೬ ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗಿದ್ದು, ದನಕನದೊಡ್ಡಿ ಗ್ರಾಮದ ರೇಣುಕಮ್ಮ ಗಂಡ ನಿಂಗಪ್ಪ ಕುಷ್ಟಗಿ-ಜೆಡಿಎಸ್,  ಚಿಲಕಮುಖಿ ಗ್ರಾಮದ ರೇಣುಕಾ ಗಂಡ ನಿಂಗಪ್ಪ- ಕಾಂಗ್ರೆಸ್ ಹಾಗೂ ಯಲಮಗೇರಾ ಗ್ರಾಮದ ಕಸ್ತೂರಮ್ಮ ಗಂಡ ಬಸನಗೌಡ- ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಎಲ್ಲ ನಾಮಪತ್ರಗಳು ಕ್ರಮಬದ್ಧವಾಗಿವೆ.  ಒಟ್ಟಾರೆ ಈವರೆಗೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.  ಫೆ. ೧೮ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದ್ದು, ಮತದಾನದ ಅಗತ್ಯ ಬಿದ್ದಲ್ಲಿ, ಮತದಾನವು ಫೆ. ೨೬ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ನಡೆಯಲಿದೆ ಎಂದು ಜಿ.ಪಂ. ಇರಕಲ್ಲಗಡ ಕ್ಷೇತ್ರ ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top