PLEASE LOGIN TO KANNADANET.COM FOR REGULAR NEWS-UPDATES


`ಮಡೆಸ್ನಾನ ಮತ್ತು ಪಂಕ್ತಿಭೇದವನ್ನು ವಿರೋಧಿಸಿ ಮಾರ್ಚ್ 26ರ ಸೋಮವಾರದಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯಮಟ್ಟದ ಬೃಹತ್ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ` ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್ ಹೇಳಿದರು. 
ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಇತ್ತೀಚಿನ ದಿನಗಳಲ್ಲಿ ಮಡೆಸ್ನಾನ ಮತ್ತು ಪಂಕ್ತಿಭೇದ ವಿರುದ್ಧ  ಕಳೆದ ನಾಲ್ಕು ತಿಂಗಳಿಂದ ನಿಡುಮಾಮಿಡಿ ಸಂಸ್ಥಾನಮಠ  ನಿರಂತರವಾಗಿ  ಧರಣಿ, ಸಭೆ, ಸಂವಾದಗಳನ್ನ ಹಮ್ಮಿಕೊಳ್ಳುವ ಮೂಲಕ ಸರ್ಕಾರವನ್ನು ಒತ್ತಾಯಿಸಿದರೂ, ಸರ್ಕಾರ  ಮಡೆಸ್ನಾನ ನಿಷೇಧಿಸುವ ಕುರಿತು ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಸರ್ಕಾರದ ಈ ಕ್ರಮವನ್ನು ವಿರೋಧಿಸಿ  136 ಮಠಾಧೀಶರುಗಳು, 19 ಮಹಿಳಾ ಗುರುಗಳು,  ಪ್ರಗತಿಪರ ಚಿಂತಕರು ಮತ್ತು ಎಲ್ಲ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ` ಎಂದು ಅವರು ತಿಳಿಸಿದರು.
ಮಾಜಿ ಸಚಿವೆ ಡಾ.ಬಿ.ಟಿ.ಲಲಿತಾ ನಾಯಕ್ ಮಾತನಾಡಿ, `ಜಾತಿ, ಮತ, ಪಂಥ ಹಾಗೂ ಪ್ರಾದೇಶಿಕ ಭೇದವಿಲ್ಲದೆ ಇಷ್ಟು ಸಂಖ್ಯೆಯಲ್ಲಿ ಧಾರ್ಮಿಕ ಮುಖಂಡರು ಒಂದೆಡೆ ಸೇರಿ ಮಡೆಸ್ನಾನ ಮತ್ತು ಪಂಕ್ತಿಭೇಧ ಹಾಗೂ ಇನ್ನಿತರ ಮೂಢನಂಬಿಕೆಗಳನ್ನು ನಿಷೇಧಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ ಎಂದು ತಿಳಿಸಿದರು.

Advertisement

0 comments:

Post a Comment

 
Top