ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಏ. ೦೨ ರಿಂದ ೧೬ ರವರೆಗೆ ಜಿಲ್ಲೆಯ ೬೦ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ಏ. ೦೨ ರಿಂದ ೧೬ ರವರೆಗೆ ಪರೀಕ್ಷಾ ದಿನದಂದು, ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ ೧೦-೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರು ಮತ್ತು ಜಾಗೃತ ದಳದವರನ್ನು ಹೊರತುಪಡಿಸಿ, ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ .
0 comments:
Post a Comment