PLEASE LOGIN TO KANNADANET.COM FOR REGULAR NEWS-UPDATES


  : ರಾಜ್ಯದ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ ಅವರು ಬುಧವಾರ ಮಂಡಿಸಿದ ೨೦೧೨-೧೩ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೊಳಿಸಿದ ಕ್ರಮವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕ ಸ್ವಾಗತಿಸಿದೆ.
  ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಹೆಚ್ಚಳ ಕುರಿತಂತೆ ವೇತನ ಪರಿಷ್ಕರಣಾ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸುಗಳನ್ನು ಜಾರಿಗೊಳಿಸುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ.  ವೇತನ ಸಮಿತಿ ಶಿಫಾರಸ್ಸು ಮಾಡಿರುವ ವರದಿಯ ಫಲಶೃತಿಯ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿ ದೊರೆತಿಲ್ಲ.  ಒಂದು ವೇಳೆ ರಾಜ್ಯ ಸರ್ಕಾರಿ ನೌಕರರಿಗೆ ಅನ್ಯಾಯವಾಗುವಂತಹ ಅಂಶಗಳು ಕಂಡುಬಂದಲ್ಲಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಘವು ಚಿಂತನೆ ನಡೆಸಲಿದೆ.  ಒಟ್ಟಾರೆ ನೌಕರರ ಸಂಘದ ಮನವಿಗೆ ಸ್ಪಂದಿಸಿ, ನೌಕರರ ವೇತನ ಪರಿಷ್ಕರಣೆಗೆ ಬಜೆಟ್‌ನಲ್ಲಿ ಪ್ರಕಟಿಸಿದ್ದಕ್ಕಾಗಿ, ರಾಜ್ಯದ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ನೌಕರರ ಸಂಘದ ರಾಜ್ಯಾಧ್ಯಕ್ಷರು, ಜಿಲ್ಲಾ ಘಟಕದ ಪದಾಧಿಕಾರಿಗಳು ಸೇರಿದಂತೆ ಎಲ್ಲ ನೌಕರ ಬಾಂಧವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top