PLEASE LOGIN TO KANNADANET.COM FOR REGULAR NEWS-UPDATES


 ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಕ್ರಯ, ಪಾಲು, ವಿಂಗಡಣೆ ಮುಂತಾದ ಸಂದರ್ಭಗಳಲ್ಲಿ ಜಮೀನುಗಳ ಹಾಗೂ ಸರ್ಕಾರ ವಹಿಸಬಹುದಾದ ಪ್ರಕರಣಗಳ ಅಳತೆ ಕಾರ್ಯವನ್ನು ಖಾಸಗಿಯಾಗಿ ನಿರ್ವಹಿಸುವ ಭೂಮಾಪಕರಿಗೆ ಪರವಾನಗಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
  ಕೊಪ್ಪಳ ಜಿಲ್ಲೆಗೆ ಒಟ್ಟು ೫೫ ಪರವಾನಗಿ ಭೂಮಾಪಕರ ಅವಶ್ಯಕತೆ ಇರುತ್ತದೆ.  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಇಲಾಖೆ ನಿರ್ದೇಶನಾಲಯದಿಂದ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೆ (ಜೆಓಸಿಟಿ-೧೧) ಶಿಕ್ಷಣದಲ್ಲಿ ಅಥವಾ ಕರ್ನಾಟಕ ರಾಜ್ಯ ತಾಂತ್ರಿಕ ಶಿಕ್ಷಣ ಮಂಡಳಿ ನಡೆಸುವ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾ ಅಥವಾ ಇದಕ್ಕೆ ತತ್ಸಮಾನ ವಿದ್ಯಾರ್ಹತೆ ಅಥವಾ ಕರ್ನಾಟಕದ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.  ಅಥವಾ ರಾಜ್ಯ ಸರ್ಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಅಥವಾ ಸರ್ವೆ ಆಫ್ ಇಂಡಿಯಾ ಅಥವಾ ಸರ್ಕಾರಿ ವಲಯಕ್ಕೆ ಒಳಪಟ್ಟ ಮಾಧ್ಯಮಗಳಲ್ಲಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕನಿಷ್ಟ ೧೦ ವರ್ಷಗಳ ಭೂಮಾಪನ ಸೇವೆ ಸಲ್ಲಿಸಿ ನಿವೃತ್ತರಾದವರು ಸಹ ಪರವಾನಗಿ ಪಡೆಯಲು ಅರ್ಹರಾಗಿರುತ್ತಾರೆ.  ವಯೋಮಿತಿ ೧೮ ರಿಂದ ೬೫ ವರ್ಷದೊಳಗಿರಬೇಕು.  ಆಯ್ಕೆಯಾದವರಿಗೆ ಕೊಪ್ಪಳ ಜಿಲ್ಲೆಗೆ ಸೀಮಿತವಾದಂತೆ ಭೂಮಾಪಕರಿಗೆ ಪರವಾನಗಿ ನೀಡಲಾಗುವುದು.   ೨೦೦ ರೂ.ಗಳ ಡಿ.ಡಿ.ಯನ್ನು ಆಯುಕ್ತರು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳು, ಬೆಂಗಳೂರು ಇವರ ಹೆಸರಿನಲ್ಲಿ ಪಡೆದು, ಜಿಲ್ಲಾಧಿಕಾರಿಗಳ ಕಚೇರಿ, ಕೊಪ್ಪಳ ಇವರಿಂದ ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಿಕೆ ಪಡೆಯಬಹುದಾಗಿದೆ.  ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಕೊಪ್ಪಳ ಇವರಿಗೆ ಮಾ. ೩೧ ರೊಳಗಾಗಿ ಸಲ್ಲಿಸುವಂತೆ ಕೊಪ್ಪಳದ ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರು  ತಿಳಿಸಿದ್ದಾರೆ.

Advertisement

0 comments:

Post a Comment

 
Top