ಮುಖ್ಯಮಂತ್ರಿ ಪಟ್ಟಕ್ಕಾಗಿ ಬಿ.ಎಸ್.ಯಡಿಯೂರಪ್ಪ ಪಟ್ಟು
ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆ ನಡೆದ ನಂತರ ಯಾವುದೇ ಸಮಯದಲ್ಲಿ ಕರ್ನಾಟಕ ವಿಧಾನಸಭೆಯ ಚುನಾವಣೆ ಘೋಷಣೆಯಾಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೊಸ ಬಾಂಬ್ ಎಸೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂಬುದನ್ನು ಅಲ್ಲಗಳೆದರು ಹಾಗೂ ಬಿಜೆಪಿಯಲ್ಲಿ ಈಗಾಗಲೆ ಅನೇಕ ಪಂಗಡಗಳಿವೆ, ಒಳಜಗಳಗಳಿವೆ, ಸಮಸ್ಯೆಗಳು ಬೆಟ್ಟದಷ್ಟಿವೆ, ಒಡೆದು ಹೋಳಾದರೂ ಆಶ್ಚರ್ಯವಿಲ್ಲ ಎಂದರು.
ಉಳಿದ ಪಕ್ಷಗಳು ಕೂಡ ಒಳಜಗಳಗಳಿಗೆ ಹೊರತಲ್ಲ. ಆದರೆ, ಎಲ್ಲ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವ ಶಕ್ತಿ ಬಿಜೆಪಿಗಿದೆ. ಚುನಾವಣೆ ಬಂದರೆ ಬಿಜೆಪಿ ಸನ್ನದ್ಧವಾಗಿದೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ನಡುವೆ ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ತನ್ನ ಬೆಂಬಲಿಗ ಶಾಸಕರು ಹಾಗೂ ಸಚಿವರನ್ನು ಬೆಂಗಳೂರಿಗೆ ಕರೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಸಂಜೆಯೇ ಕ್ಷೇತ್ರ ಬಿಡುವಂತೆ ತನ್ನ ಬೆಂಬಲಿಗ ಶಾಸಕ ಹಾಗೂ ಸಚಿವರಿಗೆ ಸೂಚಿಸಿದ ಅವರು, ನಾಳೆ ಬೆಳಗ್ಗೆ ನಡೆಯುವ ಸಭೆಯಲ್ಲಿ ಹಾಜರಿರಬೇಕೆಂದು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
0 comments:
Post a Comment