ಹೈದ್ರಾಬಾದ್-ಕರ್ನಾಟಕ ಪ್ರದೇಶ ವ್ಯಾಪ್ತಿಯ ಜಿಲ್ಲೆಗಳಿಗೆ ವಿಶಿಷ್ಟ ಸ್ಥಾನಮಾನ ಕಲ್ಪಿಸುವ ಸಂವಿಧಾನದ ೩೭೧ ನೇ ಕಲಂ ತಿದ್ದುಪಡಿಗೆ ಸಂಬಂಧಿಸಿದಂತೆ ಕೊಪ್ಪಳ ಸಂಸದ ಶಿವರಾಮಗೌಡ ಅವರು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಉತ್ತರ ನೀಡಿದ್ದಾರೆ.
ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ನೀಡಿರುವ ಉತ್ತರ ಇಂತಿದೆ. ಹೈದ್ರಾಬಾದ್-ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಗುಲಬರ್ಗಾ, ಯಾದಗಿರಿ, ರಾಯಚೂರು, ಬೀದರ್, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಮೀಸಲಾತಿ, ಹಾಗೂ ವಿಶೇಷ ಸ್ಥಾನ ಮಾನ ಕಲ್ಪಿಸುವ ಕುರಿತ ಸಂವಿಧಾನದ ೩೭೧ನೇ ಕಲಂ ತಿದ್ದುಪಡಿ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಇದು ಸಂವಿಧಾನಾತ್ಮಕ ಮಹತ್ವದ ವಿಷಯವಾಗಿದ್ದು, ಈ ಕುರಿತಂತೆ ವಿಸ್ತ್ರತ ಚರ್ಚೆಯ ಅಗತ್ಯವಿದೆ. ಅಲ್ಲದೆ ಇದರ ಜಾರಿಗೆ ಯಾವುದೇ ಕಾಲಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸಂಸದ ಶಿವರಾಮಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ್ದಾರೆ
0 comments:
Post a Comment