PLEASE LOGIN TO KANNADANET.COM FOR REGULAR NEWS-UPDATES


ಏ. ೨೪ ರಂದು ಬಸವಜಯಂತಿ ಕಾರ್ಯಕ್ರಮ
  ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರ್ಶರೀ ಬಸವೇಶ್ವರರ ಜಯಂತ್ಯೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಮಹಾನ್ ಮಾನವತಾವಾದಿ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮ ಏ. ೨೪ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ.
  ಬಸವೇಶ್ವರರ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿನ ಬಸವೇಶ್ವರರ ಭಾವಚಿತ್ರಕ್ಕೆ ಪೂಜಾ ಕಾರ್ಯಕ್ರಮ ನೆರವೇರಲಿದೆ.  ಸಂಜೆ ೪ ಗಂಟೆಗೆ ನಗರದ ಕೋಟೆ ರಸ್ತೆಯ ಮಹೇಶ್ವರ ದೇವಸ್ಥಾನದಿಂದ ಜವಾಹರ ರಸ್ತೆ ಮಾರ್ಗವಾಗಿ ಗವಿಮಠದ ಆವರಣದವರೆಗೆ ಶ್ರೀ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ವಿವಿಧ ಕಲಾತಂಡಗಳು ಮೆರವಣಿಗೆಗೆ ಹೆಚ್ಚು ಆಕರ್ಷಣೀಯವನ್ನಾಗಿಸಲಿದೆ.  ಸಂಜೆ ೬ ಗಂಟೆಗೆ ಗವಿಮಠ ಆವರಣದಲ್ಲಿ ಸಮಾರಂಭ ನಡೆಯಲಿದ್ದು, ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು.  ಸಂಸದ ಶಿವರಾಮಗೌಡ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ್ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ್, ಶಿವರಾಜ ಎಸ್ ತಂಗಡಗಿ, ಶಾಸಕರುಗಳಾದ (ವಿಧಾನಪರಿಷತ್) ಶಶಿಲ್ ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿ.ಪಂ. ಉಪಾಧ್ಯಕ್ಷೆ ಸೀತಾ ಗೂಳಪ್ಪ ಹಲಗೇರಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ತಾ.ಪಂ. ಅಧ್ಯಕ್ಷ ನಾಗರಾಜ ಚಳ್ಳೊಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ ಅವರು ಮುಖ್ಯ ಅತಿಥಿಗಳಾಗಿ ಹಾಗೂ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಶ್ರೀ ಬಸವೇಶ್ವರ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಬಸವರಾಜ ಬಳ್ಳೊಳ್ಳಿ ಅತಿಥಿಗಳಾಗಿ ಭಾಗವಹಿಸುವರು.  ಶ್ರೀ ಬಸವೇಶ್ವರರ ಕುರಿತು ಗುಲಬರ್ಗಾ ವಿವಿ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಜಯಶ್ರೀ ದಂಡೆ ಅವರು ವಿಶೇಷ ಉಪನ್ಯಾಸ ನೀಡುವರು.  ಕೊಪ್ಪಳದ ಸದಾಶಿವ ಪಾಟೀಲ್ ಮತ್ತು ಸಂಗಡಿಗರಿಂದ ವಚನ ಗಾಯನ ಕಾರ್ಯಕ್ರಮ ಜರುಗಲಿದೆ. 

Advertisement

0 comments:

Post a Comment

 
Top