ಕರ್ನಾಟಕ ನಾಗರಿಕ ಸೇವಾ ಖಾತ್ರಿ ಯೋಜನೆ ಸಕಾಲ ಯೋಜನೆಯ ಉದ್ಘಾಟನಾ ಸಮಾರಂಭ ಏ. ೦೨ ರಂದು ಬೆಳಿಗ್ಗೆ ೯ ಗಂಟೆಗೆ ಕೊಪ್ಪಳ ನಗರಸಭೆಯ ಕಾರ್ಯಾಲಯದಲ್ಲಿ ನಡೆಯಲಿದೆ.
ಸಮಾರಂಭದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿರುವ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎನ್. ಮಂಜುನಾಥ ಪ್ರಸಾದ್ ಅವರು ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ್ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ, ಶಿವರಾಜ ಎಸ್ ತಂಗಡಗಿ, ವಿಧಾನಪರಿಷತ್ ಸದಸ್ಯರುಗಳಾದ ಶಶಿಲ್ ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಸೀತಾ ಹಲಗೇರಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ತಾಲೂಕಾ ಪಂಚಾಯತಿ ಅಧ್ಯಕ್ಷ ನಾಗರಾಜ ಚಳ್ಳೊಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
0 comments:
Post a Comment