ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಪಾಲನೆಯ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮದ್ಯಪಾನ ನಿಷೇಧಾಜ್ಟೆ ಜಾರಿಗೊಳಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಆದೇಶ ಹೊರಡಿಸಿದ್ದಾರೆ.
ಹುಲಿಗೆಮ್ಮ ದೇವಿಯ ಜಾತ್ರೆಗೆ ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ನೆರೆಹೊರೆಯ ರಾಜ್ಯಗಳಿಂದ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಸೇರುವ ಸಂಭವವಿದೆ. ಜಾತ್ರೆಯ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೇ. ೧೩ ರಂದು ಬೆಳಿಗ್ಗೆ ೬ ಗಂಟೆಯಿಂದ ಮೇ. ೧೬ ರಂದು ಬೆಳಿಗ್ಗೆ ೬ ಗಂಟೆಯವರೆಗೆ ಹುಲಿಗಿ ಗ್ರಾಮದಲ್ಲಿ ಮದ್ಯಪಾನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ಈ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವೈನ್ ಶಾಪ್, ಬಾರ್‌ಗಳು, ಸಗಟು ಮತ್ತು ಚಿಲ್ಲರೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಆದೇಶ ಜಾರಿಗೊಳಿಸಲು ಅಬಕಾರಿ ಉಪಾಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದ್ದು, ಆದೇಶ ಜಾರಿಗೆ ನಿರ್ಲಕ್ಷ್ಯತನ ತೋರುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ
0 comments:
Post a Comment