:ನಾಲ್ವರು ಅಧಿಕಾರಿಗಳು, ಮಧ್ಯವರ್ತಿಗಳ ಬಂಧನ : ನಾಲ್ವರು ಅಧಿಕಾರಿಗಳು, ಮಧ್ಯವರ್ತಿಗಳ ಬಂಧನ
ಬೆಂಗಳೂರು, ಮೇ 18: ಭಾರೀ ಅವ್ಯವಹಾರದ ಆರೋಪದ ಹಿನ್ನೆಲೆಯಲ್ಲಿ ನಗರದ ನಾಲ್ಕು ಉಪ ನೋಂದಣಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಿಢಿರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಅಪಾರ ಪ್ರಮಾಣದ ಹೆಚ್ಚುವರಿ ನಗದು, ದಾಖಲೆಗಳನ್ನು ವಶಪಡಿಸಿ ಕೊಂಡಿದ್ದು, ನಾಲ್ಕು ಮಂದಿ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಶುಕ್ರವಾರ ಇಲ್ಲಿನ ರಾಜರಾಜೇಶ್ವರಿನಗರ, ಬನಶಂಕರಿ, ನಾಗರಬಾವಿ ಹಾಗೂ ಶಿವಾಜಿನಗರ ಉಪ ನೋಂದಣಿ ಕಚೇರಿಗಳ ಮೇಲೆ ಲೋಕಾಯುಕ್ತ ಡಿವೈಎಸ್ಪಿಗಳಾದ ಅಬ್ದುಲ್ ಅಹದ್, ಪ್ರಸನ್ನ ವಿ.ರಾಜು, ಪಾಲಾಕ್ಷಯ್ಯ ಹಾಗೂ ಎಸ್. ಗಿರೀಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಒಟ್ಟು ನಾಲ್ಕು ಮಂದಿ ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ರಾಜರಾಜೇಶ್ವರಿನಗರದ ಉಪ ನೋಂದಣಾಧಿಕಾರಿಣಿ ಜಯಮ್ಮ ಹಾಗೂ ಮಧ್ಯವರ್ತಿ ರಮೇಶ್ ಎಂಬವನನ್ನು ಬಂಧಿಸಿದ್ದು, 40 ಸಾವಿರ ರೂ. ಹೆಚ್ಚುವರಿಯಾಗಿ ಸಂಗ್ರಹಿಸಿದ್ದ ನಗದು ಹಾಗೂ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
0 comments:
Post a Comment