ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವೋದಯ ಸಮಗ್ರ ಗ್ರಾಮಿಣ ಅಭಿವೃದ್ಧಿ ಸಂಸ್ಥೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ. ೫ ರಂದು ಕೊಪ್ಪಳದಲ್ಲಿ ಯಕ್ಷಗಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ ೧೦-೩೦ ಗಂಟೆಗೆ ಹೊಸಪೇಟೆ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಜರುಗಲಿದೆ. ನಂತರ ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಪರಿಸರ ಜಾಗೃತಿ ಕುರಿತ ಸಮಾರಂಭ ನಡೆಯಲಿದ್ದು, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್, ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಆರ್. ಭಾಂಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಪರಿಸರ ಜಾಗೃತಿ ಕುರಿತಂತೆ ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಜಿ. ಹೆಗಡೆ ಮತ್ತು ಸಂಗಡಿಗರಿಂದ ಪರಿಸರ ವಿಜಯ ಎಂಬ ಪರಿಸರ ಜಾಗೃತಿ ಕುರಿತ ಯಕ್ಷಗಾನ ಕಾರ್ಯಕ್ರಮ ನೆರವೇರಲಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಎಂ. ಶ್ರೀಧರ ಅವರು ತಿಳಿಸಿದ್ದಾರೆ.
0 comments:
Post a Comment