ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೂಲಿ ಕೆಲಸವನ್ನು ಒದಗಿಸಿ ಜನರು ಗುಳೆ ಹೋಗದಂತೆ ಸ್ಥಳೀಯವಾಗಿ ಕೆಲಸ ಒದಗಿಸಲು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
ಈಗಾಗಲೇ ಕೊಪ್ಪಳ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆಯಾದ ಪ್ರಯುಕ್ತ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಗಳ ಗ್ರಾಮಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮ ಪಂಚಾಯತಿಗಳಿಗೆ ಅನುಮೋದನೆಗೊಂಡ ಕ್ರಿಯಾ ಯೋಜನೆಯಂತೆ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ನೊಂದಾಯಿಸಿಕೊಂಡ ಕೂಲಿಕಾರರಿಗೆ ನಮೂನೆ-೬ ರಲ್ಲಿ ಬೇಡಿಕೆಯನ್ನು ಪಡೆದುಕೊಂಡು ತೀವ್ರಗತಿಯಲ್ಲಿ ಸ್ಥಳೀಯವಾಗಿ ಕೂಲಿಕಾರರಿಗೆ ಕೂಲಿ ಕೆಲಸಗಳನ್ನು ಒದಗಿಸಿ, ಕೂಲಿಕಾರರಿಗೆ ಪ್ರತಿ ದಿನಕ್ಕೆ ರೂ. ೧೫೫ ರಂತೆ ಹಣ ಪಾವತಿಸಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಅದರಂತೆ ತಾಲೂಕಿನ ಗ್ರಾಮ ಪಂಚಾಯತ ಮಟ್ಟದಲ್ಲಿ ಕೆಲವೊಂದು ಗ್ರಾಮ ಪಂಚಾಯತಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ಕೂಲಿ ಕೆಲಸಕ್ಕಾಗಿ ಬೇಡಿಕೆಗನುಗುಣವಾಗಿ ತೀವ್ರವಾಗಿ ಕ್ರಮ ಜರುಗಿಸಲು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
0 comments:
Post a Comment