ಕಾನೂನು ಅರಿವು-ನೆರವು ಕಾರ್ಯಕ್ರಮ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಜೂ. ೧೨ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಆವರಣದಲ್ಲಿ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಬಿ. ಸಿಂಧೆ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಎರಡನೆ ತ್ವರಿತ ನ್ಯಾಯಾಲಯದ ನ್ಯಾಯಾಧೀಶ ಎಲ್.ಬಿ. ಜಂಬಗಿ, ಸಿವಿಲ್ ಜಡ್ಜ್ (ಹಿರಿಯ ವಿಭಾಗ) ಕೆ. ಶಿವರಾಮ್, ಸಿವಿಲ್ ಜಡ್ಜ್ (ಕಿರಿಯ ವಿಭಾಗ) ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಭುರಾಜ ಇನಾಮತಿ, ಉಪಾಧ್ಯಕ್ಷ ಎ.ವಿ. ಕಣವಿ, ಜಿಲ್ಲಾ ಸರ್ಕಾರಿ ವಕೀಲ ಪ್ರಭುರಾಜ ಇನಾಮತಿ, ಜಿಲ್ಲಾ ಸರ್ಕಾರಿ ವಕೀಲ ವಿ.ಎಂ. ಭೂಸನೂರ ಮಠ, ಡಿಡಿಪಿಐ ಮಂಟೇಲಿಂಗಾಚಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕೆ.ಪಿ. ಮುಸಿಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ತ್ರಿಶಲಾ ಅಪ್ಪಣ್ಣವರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಜಶೇಖರ ಎಂ., ಕಾರ್ಮಿಕ ನಿರೀಕ್ಷಕ ಬಸಯ್ಯ ಎನ್. ಅಂಗಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಗಂಗಾವತಿ ತಾಲೂಕು ಕಾರ್ಮಿಕ ನಿರೀಕ್ಷಕಿ ಭುವನೇಶ್ವರಿ ಕೋಟಿಮಠ ಅವರು ಬಾಲಕಾರ್ಮಿಕರ ಕಾಯ್ದೆ ಹಾಗೂ ಪುನರ್ ವಸತಿ ಮತ್ತು ಶಿಕ್ಷಣ ವಿಷಯ ಕುರಿತು, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ ತರಬೇತಿ ಸಂಯೋಜಕ ಹರೀಶ್ ಜೋಗಿ- ಜಿಲ್ಲಾ ಮಕ್ಕಳ ಹಕ್ಕು ಮತ್ತು ರಕ್ಷಣೆ. ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ- ಬಾಲಕಾರ್ಮಿಕರ ಬಗ್ಗೆ ಸರ್ಕಾರದ ಯೋಜನೆ ಹಾಗೂ ಉಪಯೋಗ. ಮತ್ತು ಬಾಲನ್ಯಾಯ ಮಂಡಳಿ ಸದಸ್ಯೆ ಸಾವಿತ್ರಿ ಮುಜುಂದಾರ್- ಜಿಲ್ಲೆಯಲ್ಲಿ ಮಕ್ಕಳ ಸ್ಥಿತಿಗತಿ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೯ ಗಂಟೆಗೆ ತಹಸಿಲ್ದಾರರ ಕಚೇರಿ ಆವರಣದಿಂದ ಜಾಥಾ ಹೊರಟು, ನಂತರ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಆವರಣವನ್ನು ತಲುಪಲಿದೆ. ಬಾಲಕಾರ್ಮಿಕ ಕಾಯ್ದೆ ೧೯೮೬ ಕಲಂ ೧೭ ರಡಿ ನೇಮಕಗೊಂಡ ನಿರೀಕ್ಷಕರುಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಜಾಥಾ ಕಾರ್ಯಕ್ರಮದಲ್ಲಿ ತಪ್ಪದೆ ಭಾಗವಹಿಸಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ತಿಳಿಸಿದ್ದಾರೆ.
0 comments:
Post a Comment