PLEASE LOGIN TO KANNADANET.COM FOR REGULAR NEWS-UPDATES



 ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೊಪ್ಪಳ ತಾಲೂಕಿನಲ್ಲಿನ ಕೆರೆಗಳ ಹೂಳು ತೆಗೆಯುವ ಕಾಮಗಾರಿಯನ್ನು ಪ್ರಾರಂಭಿಸಲಾಗಿದ್ದು, ಈ ಯೋಜನೆಯನ್ನು ಹಂತ ಹಂತವಾಗಿ ಎಲ್ಲಾ ಗ್ರಾ.ಪಂ. ವ್ಯಾಪ್ತಿಗೆ ವಿಸ್ತರಿಸಲಾಗುವುದು ಎಂದು ಕೊಪ್ಪಳ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
       ಕೊಪ್ಪಳ ತಾಲೂಕಿನ ಕೋಳೂರು ಗ್ರಾ.ಪಂ. ವ್ಯಾಪ್ತಿಯ ಕೋಳೂರು ಗ್ರಾಮದಲ್ಲಿ ಜು.೦೯ ರಿಂದ ಕೆರೆ ಹೂಳೆತ್ತುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು ೩ ದಿನಗಳಿಂದ ನಿರಂತರವಾಗಿ ಕೆಲಸ ನಡೆಸಲಾಗುತ್ತಿದೆ.  ಈ ಮೂಲಕ ಸುಮಾರು ೧೧೨ ಕುಟುಂಬಗಳಿಗೆ ಉದ್ಯೋಗವನ್ನು ನೀಡಲಾಗಿದೆ. ಕಾಮಗಾರಿ ನಡೆಯವ ಸ್ಥಳಕ್ಕೆ ರಾಜ್ಯ ಜೈವಿಕ ಇಂಧನ ಅಭಿವೃದ್ದಿ ಮಂಡಳಿಯ ಸದಸ್ಯರಾದ ಜೆ.ಟಿ.ರಾಜಶೇಖರ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಸಹಾಯಕ ನಿರ್ದೇಶಕ ವಿರುಪಾಕ್ಷಪ್ಪ ಪಾಟೀಲ್, ಕಿರಿಯ ಅಭಿಯಂತರ ಓಂಕಾರಮೂರ್ತಿ, ಎಂಐಎಸ್ ಸಂಯೋಜಕಕರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಮಗಾರಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ.  ಗ್ರಾಮಸ್ಥರು ಬರಗಾಲದ ಸ್ಥಿತಿ ಉಲ್ಬಣಗೊಂಡಿರುವ ಸಮಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದು,  ಉದ್ಯೋಗಖಾತ್ರಿ ಯೋಜನೆಯಡಿ ಹಂತ ಹಂತವಾಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿನ ಕೆರೆಗಳ ಹೂಳೆತ್ತುವ ಕಾಮಗಾರಿಯನ್ನು ಪ್ರಾರಂಭಿಸಿ, ಹೆಚ್ಚಿನ ಕುಟುಂಬಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top