ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ೯೫ನೇ ಸಭೆಯಲ್ಲಿ ನಿರ್ಣಯ ಕೈಗೊಂಡಂತೆ ಮುಂಗಾರು ಹಂಗಾಮಿಗೆ ವಿವಿಧ ಕಾಲುವೆಗಳಿಗೆ ಲಭ್ಯತೆ ಅನುಸಾರ ನೀರನ್ನು ಬಿಡಲಾಗುವುದು ಎಂದು ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಎಸ್.ಹೆಚ್.ಮಂಜಪ್ಪ ಅವರು ತಿಳಿಸಿದ್ದಾರೆ.
ಎಡದಂಡೆ ಮುಖ್ಯ ಕಾಲುವೆ ಮತ್ತು ಎಡೆದಂಡೆ ಮೇಲ್ಮಟ್ಟದ ಕಾಲುವೆಗೆ ಅಲ್ಲದೆ ಬಲದಂಡೆ ಕೆಳಮಟ್ಟದ ಕಾಲುವೆ, ಬಲದಂಡೆ ಮೇಲ್ಮಟ್ಟದ ಕಾಲುವೆಗಳಿಗೆ ನವೆಂಬರ್ ೩೦ ರವರೆಗೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆ ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲೋ ಅದು ಅನ್ವಯಿಸುತ್ತದೆ. ರಾಯ-ಬಸವಣ್ಣ ಕಾಲುವೆಗಳಿಗೆ ಡಿಸೆಂಬರ್ ೧೦ ರವರೆಗೆ ಅಥವಾ ಈ ಕಾಲುವೆಯಡಿ ನೀರು ಲಭ್ಯತೆ ಇರುವವರೆಗೆ ಮಾತ್ರ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತುಂಗಭದ್ರಾ ಜಲಾಶಯದಿಂದ ನೀರು ಬಿಡಲಾಗುವುದು.
ಅನಧಿಕೃತವಾಗಿ ಕಾಲುವೆಗಳಿಂದ ಪೈಪ್, ಸೈಫನ್‌ಗಳ ಮೂಲಕ ನೀರೆತ್ತಿ ನೀರಾವರಿ ಮಾಡಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಅದರಂತೆ ಕ್ರಮ ವಹಿಸಲಾಗುವುದು ಎಂದು ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಎಸ್.ಹೆಚ್.ಮಂಜಪ್ಪ ತಿಳಿಸಿದ್ದಾರೆ.
0 comments:
Post a Comment