: ೬೬ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಧ್ವಜಾರೋಹಣ ನೆರವೇರಿಸಿದರು. ಸಚಿವ ಮುರುಗೇಶ್ ನಿರಾಣಿ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು. ಸಂಸದ ಶಿವರಾಮಗೌಡ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಶಾಸಕರುಗಳಾದ ಸಂಗಣ್ಣ ಕರಡಿ, ಹಾಲಪ್ಪ ಆಚಾರ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಮುಂತಾದವರು ಪಾಲ್ಗೊಂಡಿದ್ದರು. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೊಪ್ಪಳ ವಿಭಾಗದಲ್ಲಿ ಅಪರಾಧ ಮತ್ತು ಅಪಘಾತ ರಹಿತವಾಗಿ ಸೇವೆ ಸಲ್ಲಿಸಿರುವ ವಾಹನ ಚಾಲಕರಿಗೆ ಬೆಳ್ಳಿ ಪದಕ ಹಾಗೂ ಪ್ರಶಸ್ತಿ ಪತ್ರ ಪ್ರದಾನ ಮಾಡಿದರು. ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ೮೦ ಲಕ್ಷ ರೂ. ವೆಚ್ಚದಲ್ಲಿ ಬ್ಯಾಸ್ಕೆಟ್‌ಬಾಲ್, ಸ್ಕೇಟಿಂಗ್, ವಾಲಿಬಾಲ್ ಅಂಗಣ, ಪೆವಿಲಿಯನ್ ಬ್ಲಾಕ್ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರು ಭೂಮಿ ಪೂಜೆ ನೆರವೇರಿಸಿದರು. ಸಂಸದ ಶಿವರಾಮಗೌಡ, ಶಾಸಕರುಗಳಾದ ಸಂಗಣ್ಣ ಕರಡಿ, ಹಾಲಪ್ಪ ಆಚಾರ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿ.ಎನ್. ಘಾಡಿ ಮುಂತಾದವರು ಪಾಲ್ಗೊಂಡಿದ್ದರು.
Home
»
»Unlabelled
» ಕೊಪ್ಪಳದಲ್ಲಿ ೬೬ನೇ ಸ್ವಾತಂತ್ರ್ಯ ದಿನಾಚರಣೆ
Subscribe to:
Post Comments (Atom)
0 comments:
Post a Comment