26/11 ದಾಳಿ:
ಹೊಸದಿಲ್ಲಿ, ಆ.29: ಮುಂಬೈಯ 26/11 ದಾಳಿಯ ಪ್ರಮುಖ ಆರೋಪಿ, ಪಾಕಿಸ್ತಾನಿ ಉಗ್ರ ಅಜ್ಮಲ್ ಕಸಬ್‌ಗೆ ವಿಧಿಸಲಾಗಿದ್ದ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಖಾಯಂಗೊಳಿಸಿದ್ದು, ಶಿಕ್ಷೆಯನ್ನು ರದ್ದು ಪಡಿಸುವಂತೆ ಕೋರಿ ಕಸಬ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ.
26/11 ದಾಳಿಯಲ್ಲಿ ಸೆರೆ ಸಿಕ್ಕ ಏಕೈಕ ಉಗ್ರ ಅಜ್ಮಲ್ ಕಸಬ್‌ಗೆ ಮುಂಬೈ ವಿಶೇಷ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿತ್ತು. ಇದನ್ನು ಮುಂಬೈ ಹೈಕೋರ್ಟ್ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಅಜ್ಮಲ್ ಕಸಬ್ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದ.
ತನಗೆ ಮುಂಬೈ ವಿಶೇಷ ನ್ಯಾಯಾಲಯದಲ್ಲಿ ಸರಿಯಾಗಿ ವಕೀಲರನ್ನು ಒದಗಿಸಿಕೊಟ್ಟಿಲ್ಲ. ಆದುದರಿಂದ ತನ್ನ ವಾದವನ್ನು ಸರಿಯಾಗಿ ಮಂಡಿಸಲು ಸಾಧ್ಯವಾಗಿಲ್ಲ ಎಂದು ಕಸಬ್ ಅರ್ಜಿಯಲ್ಲಿ ತಿಳಿಸಿದ್ದ.
ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಅಫ್ತಾಬ್ ಆಲಂ ಹಾಗೂ ಸಿ.ಕೆ.ಪ್ರಸಾದ್‌ರಿದ್ದ ನ್ಯಾಯಪೀಠ, ‘‘ಕಸಬ್ ಭಾರತದ ವಿರುದ್ಧ ಯುದ್ಧ ಸಾರಿದ್ದಾನೆ. ಭಾರತದ ವಿರುದ್ಧ ಯುದ್ಧ ಸಾರಿದ್ದು, ಘೋರ ಅಪರಾಧ. ಇದಕ್ಕೆ ಮರಣ ದಂಡನೆಯಲ್ಲದೆ ಬೇರೆ ಆಯ್ಕೆಗಳಿಲ್ಲ.’’ ಎಂದು ತಿಳಿಸಿ, ಕಸಬ್‌ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.
2008ರ ನವೆಂಬರ್‌ನಲ್ಲಿ ನಡೆದ ದಾಳಿ ಭಾರತೀಯರ ಮೇಲೆ ನಡೆದ ದಾಳಿಯಲ್ಲ. ಇದು ಭಾರತ ಸರಕಾರದ ಮೇಲೆ ನಡೆದ ದಾಳಿ ಎಂಬ ಕಸಬ್‌ನ ಹೇಳಿಕೆಯನ್ನು ಇದೇ ವೇಳೆ ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ
0 comments:
Post a Comment