ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮವನ್ನು ಸೆ.೧೭ ರಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ಅಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ದ್ವಜಾರೋಹಣವನ್ನು ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈದರಾಬಾದ-ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ನಾಗರಾಜ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಶಿವರಾಜ ಎಸ್.ತಂಗಡಗಿ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಹಾಲಪ್ಪ ಆಚಾರ, ಜಿ.ಪಂ. ಉಪಾಧ್ಯಕ್ಷೆ ಡಾ.ಸೀತಾ ಗೂಳಪ್ಪ ಹಲಗೇರಿ, ತಾ.ಪಂ.ಅಧ್ಯಕ್ಷ ನಾಗರಾಜ ಚಲ್ಲೊಳ್ಳಿ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್.ಮಂಜುನಾಥ ಪ್ರಸಾದ ಅವರು ಆಗಮಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿವಿಧ ಸ್ಥಬ್ದ ಚಿತ್ರಗಳ ಮೆರವಣಿಗೆ ಅಂದು ಬೆಳಿಗ್ಗೆ ೮ ಗಂಟೆಗೆ ಜರುಗಲಿದ್ದು, ಕೊಪ್ಪಳ ಜಿಲ್ಲಾಡಳಿತ ಭವನ ಆವರಣದಿಂದ ಧ್ವಜಾರೋಹಣ ನಡೆಯುವ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಲಿದೆ. ಅಲ್ಲದೇ ವಿವಿಧ ಶಾಲಾ ಮಕ್ಕಳು ಹಾಗೂ ಪೊಲೀಸ್, ಎನ್.ಸಿ.ಸಿ. ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಗೃಹ ರಕ್ಷಕ ದಳಗಳಿಂದ ಪಥ ಸಂಚಲನ ಮತ್ತು ಗೌರವ ರಕ್ಷೆ ಸ್ವೀಕಾರ ಜರುಗಲಿದೆ. ಅತಿಥಿ ಉಪನ್ಯಾಸಕರಾಗಿ ದ್ಯಾಂಪೂರಿನ ಹಿರಿಯ ಸಾಹಿತಿ ಪ್ರೋ||ಬಸವರಾಜ ಪುರಾಣಿಕ ಅವರು ಆಗಮಿಸುವರು. ಶಾಲಾ ಮಕ್ಕಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸದವರಿಗೆ ಈ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಜರುಗಲಿದೆ.
0 comments:
Post a Comment