PLEASE LOGIN TO KANNADANET.COM FOR REGULAR NEWS-UPDATES

ಕರ್ನಾಟಕ ರಾಜ್ಯ ಬೀಜ ಪ್ರಮಾಣನ ಸಂಸ್ಥೆಯ ಪ್ರಾರಂಭೋತ್ಸವ ಕಾರ್ಯಕ್ರಮ ನ.೦೧ ರಂದು ಬೆಳಿಗ್ಗೆ ೧೧.೩೦ ರಂದು ಕೊಪ್ಪಳದ ಕೃಷಿ ನಿರ್ದೇಶಕರ ಕಛೇರಿ ಆವರಣದಲ್ಲಿ ಜರುಗಲಿದೆ.

ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ. ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಧ್ಯಕ್ಷತೆ ವಹಿಸುವರು.  
ಮುಖ್ಯ ಅತಿಥಿಗಳಾಗಿ  ಸಂಸದ ಶಿವರಾಮಗೌಡ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಪರಣ್ಣ ಮುನವಳ್ಳಿ, ಶಿವರಾಜ ಎಸ್.ತಂಗಡಗಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ ವಾಲ್ಮೀಕಿ, ತಾ.ಪಂ.ಅಧ್ಯಕ್ಷ ದೇವಪ್ಪ ಭರಮಪ್ಪ ಮೇಕಾಳಿ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ ಮೂಲಿಮನಿ, ರಾಜ್ಯ ಬೀಜ ಪ್ರಮಾಣ ಸಂಸ್ಥೆಯ ನಿರ್ದೇಶಕ ಎ.ಸಿ. ನಟರಾಜ, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಲು ಒಕ್ಕೂಟ ಮಹಾಮಂಡಳಿ ನಿರ್ದೇಶಕ ನಾಗನಗೌಡ, ಆಡಳಿತ ಮಂಡಳಿ ಸದಸ್ಯರುಗಳಾದದ ರೇವಣ್ಣಪ್ಪ ಹೆಚ್.ಸಂಕಟಿ, ಜಗದೀಶ ಬಸಗಣ್ಣಿ, ಪರಮಶಿವಪ್ಪ, ನಾರಾಯಣ ಸಿ.ಸಪಾರೆ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ, ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ|| ಬಿ.ವಿ. ಪಾಟೀಲ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ: ಪದ್ಮಯ ನಾಯಕ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಹೆಚ್.ಬಿ.ವಸಂತಪ್ಪ ಅವರು ಭಾಗವಹಿಸುವರು.

Advertisement

0 comments:

Post a Comment

 
Top