PLEASE LOGIN TO KANNADANET.COM FOR REGULAR NEWS-UPDATES






  ಅ. ೨೯: ಬೆಂಗಳೂರಿನಲ್ಲಿರುವ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡುವುದು ಸೂಕ್ತ ಎಂದು ಶಾಸಕ ಸಂಗಣ್ಣ ಕರಡಿ ಅಭಿಪ್ರಾಯಪಟ್ಟಿದ್ದಾರೆ. 
        ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೊಪ್ಪಳದ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ವಿಧಾನಸೌಧದ ಒಳಗೂ, ಹೊರಗೂ ಧ್ವನಿ ಎತ್ತುವುದಾಗಿ ಭರವಸೆ ನೀಡಿದರು. ಮಹಾಕಾವ್ಯ ರಾಮಾಯಣವನ್ನು ಸಂಸ್ಕೃತದಲ್ಲಿ ರಚಿಸಿ ಆದರ್ಶಪುರುಷ ರಾಮನನ್ನು ಇಡೀ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ಇಂತಹ ಶ್ರೇಷ್ಟ ದಾರ್ಶನಿಕನ ಹೆಸರನ್ನು ಸಂಸ್ಕೃತ ವಿವಿಗೆ ನಾಮಕಾರಣ ಮಾಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸುವುದಾಗಿ ಹೇಳಿದರು. 
       ವೀರ ಮದಕರಿ ನಾಯಕ, ಸಿಂಧೂರ ಲಕ್ಷ್ಮಣ ಸೇರಿದಂತೆ ವಾಲ್ಮೀಕಿ ಸಮುದಾಯದ ನೂರಾರು ಮಹನೀಯರು ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಮಹನೀಯರ ತತ್ವ, ಆದರ್ಶಗಳನ್ನು ಪಾಲಿಸಬೇಕಿದೆ ಎಂದರು. 
ಹಿಂದಿನ ಕಾಲದಲ್ಲಿ ನಾಯಕ ಜನಾಂಗ ಎಂದರೆ ಖಡ್ಗ ಹಿಡಿದು ಶೂರತ್ವದಿಂದ ಹೋರಾಡುತ್ತಿತ್ತು. ಆದರೆ, ಇಂದಿನ ಆಧುನಿಕ ಯುಗದಲ್ಲಿ ಕತ್ತಿ ಝಳಪಿಸುವ ಅಗತ್ಯವಿಲ್ಲ. ಬದಲಾಗಿ ಶೈಕ್ಷಣಿಕ ಪ್ರಗತಿ ಸಾಽಸುವತ್ತ ಸಮಾಜ ಗಮನಹರಿಸಬೇಕು. ಕಂಪ್ಯೂಟರ್ ಯುಗಕ್ಕೆ ಹೊಂದಿಕೊಳ್ಳಬೇಕೆಂದು ಸಲಹೆ ನೀಡಿದರು. 
       ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ ಮಾತನಾಡಿ, ವರ್ಷಕ್ಕೊಮ್ಮೆ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ಮಾಡಿ ವಿಂಜ್ರಭಣೆಯಿಂದ ಆಚರಿಸಿದರೆ ಸಾಲದು. ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡುವತ್ತ ಸಮುದಾಯ ಚಿಂತಿಸಬೇಕು. ಆರ್ಥಿಕ, ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಬಡತನ ನಿರ್ಮೂಲನೆ ಸಾಧ್ಯ ಎಂದು ಹೇಳಿದರು.
       ಮುಖ್ಯ ಉಪನ್ಯಾಸಕರಾಗಿ ಆಗಮಿಸಿದ್ದ ರಾಯಚೂರು ಕೃಷಿ ವಿವಿ ಪ್ರಾಧ್ಯಾಪಕ ಡಾ.ಎಸ್.ಕೆ.ಮೇಟಿ ಮಾತನಾಡಿ. ಹಿಂದೆ ನಾಯಕ ಜನಾಂಗದವರು ಖಡ್ಗ ಹಿಡಿದು ಹೋರಾಡುತ್ತಿದ್ದರು. ಆದರೆ, ಈಗ ಯುಕ್ತಿಯಿಂದ ರಾಜ್ಯವನ್ನಾಳಬೇಕೆಂದು ಸಲಹೆ ನೀಡಿದರು.
      ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಜಾರಾಮ್ ಅವರು ರಚಿಸಿ ,ಸ್ವತಃ ಹಾಡಿರುವ ಶಬರಿ ಮಲೆ ಅಯ್ಯಪ್ಪ ಸ್ವಾಮಿಯ ಭಕ್ತಿ ಗೀತೆಗಳ ಸಿ.ಡಿ.ಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
      ಇದಕ್ಕೂ ಮುನ್ನ ಶಿರಸಪ್ಪಯ್ಯನಮಠದಿಂದ ನಗರದ ಪ್ರಮುಖ ಬೀದಿಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಿತು. ಡೊಳ್ಳು ಕುಣಿತ ,ವೀರಗಾಸೆ,ಕೋಲಾಟ,ಜಗ್ಗಲಿಗೆ ಮೇಳ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳನ್ನೊಳಗೊಂಡಿದ್ದ ಮೆರವಣಿಗೆಯು ಜನರನ್ನು ಆಕರ್ಷಿಸಿತು.
     ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಬಿ.ಎಸ್.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಬಿ.ಪಿ.ಅಡ್ನೂರ್, ಜಿ. ಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಜಿ.ಪಂ.ಸದಸ್ಯರಾದ ಜನಾರ್ದನ ಹುಲಿಗಿ, ನಾಗನಗೌಡ ಪಾಟೀಲ್, ಜಿ.ಪಂ. ಸಿಇಓ ಎಸ್.ರಾಜಾರಾಂ, ತಾಲೂಕು ಪಂಚಾಯತ್ ಅಧ್ಯಕ್ಷ ದೇವಪ್ಪ ಮೆಕಾಳಿ, ತಾ.ಪಂ. ಮಾಜಿ ಅಧ್ಯಕ್ಷ ಅಮರೇಶ ಉಪಲಾಪೂರ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ನಗರಸಭಾ ಸದಸ್ಯೆ ಇಂದಿರಾ ಭಾವಿಕಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

0 comments:

Post a Comment

 
Top