ಕೊಪ್ಪಳ, ನ. ೨೮ : ಗೋವಾದ ವಾಸ್ಕೊದಲ್ಲಿ ನಡೆಯುವ ೬ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ರಾಷ್ಟ್ರೀಯ ದಾಳಿಂಬೆ ಬೆಳೆಗಾರರ ಸಂಘದ ಉಪಾಧ್ಯಕ್ಷರಾದ ದೇವೇಂದ್ರಪ್ಪ ಬಳೂಟಗಿ ಅವರು ಆಯ್ಕೆಯಾಗಿದ್ದಾರೆ. ಗೋವಾದ ವಾಸ್ಕೊದಲ್ಲಿ ಕಳೆದ ೬ ವರ್ಷಗಳಿಂದ ಕರ್ನಾಟಕ ಸಂಘ ವಾಸ್ಕೊ ಹಾಗೂ ಕರ್ನಾಟಕ ಜಾಗೃತಿ ವೇದಿಕೆ ಬೇಂಗಳೂರು ಜಂಟಿಯಾಗಿ ಈ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಬಾರಿ ಪ್ರಗತಿಪರ ರೈತರಾದ ದೇವೇಂದ್ರಪ್ಪ ಬಳೂಟಗಿ ಅವರನ್ನು ಆಯ್ಕೆ ಮಾಡಿದ್ದು ಒಂದು ವಿಶೇಷವಾಗಿದೆ.
ಡಿ. ೨ರ ಭಾನುವಾರದಂದು ಗೋವಾದ ವಾಸ್ಕೊದ ಎಂಪಿಟಿ ಭವನದಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕರ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕದ ಮಂತ್ರಿಗಳಾದ ಎಸ್.ಕೆ. ಬೆಳ್ಳುಬ್ಬಿ ಮತ್ತು ಗೋವಿಂದ ಕಾರಜೋಳ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಹೊರನಾಡ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಈ ಸಮ್ಮೇಳನವನ್ನು ನಡೆಸಲಾಗುತ್ತಿದೆ ಎಂದು ಕರ್ನಾಟಕ ಸಂಘ ವಾಸ್ಕೊ ಅಧ್ಯಕ್ಷ ಸಿದ್ದಣ್ಣ ಮೇಟಿ ಮತ್ತು ಕರ್ನಾಟಕ ಜಾಗೃತಿ ವೇದಿಕೆಯ ಬೆಂಗಳೂರಿನ ಅಧ್ಯಕ್ಷ ಮಹೇಶಬಾಬು ಸುರ್ವೆ ಅವರು ತಿಳಿಸಿದ್ದಾರೆ.

0 comments:
Post a Comment