ಕೊಪ್ಪಳ : ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ಪ್ರಾಚೀನ ಕವಿ ಕಾವ್ಯ ಚಿಂತನಾ ಮಾಲೆ (ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ) ದಿನಾಂಕ ೨೯-೧೧-೨೦೧೨ ರಂದು ಬೆಳಗ್ಗೆ ೧೦:೩೦ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಮಂಟೆಸ್ವಾಮಿಯ ಜಾನಪದ ಸಾಹಿತ್ಯದಲ್ಲಿ ಕಥೆ ಹಾಗೂ ಮಂಟೆಸ್ವಾಮಿಯ ಮೌಖಿಕ ಪರಂಪರೆಯ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಧಾರವಾಡ ವಿಶ ವಿದ್ಯಾಲಯದ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾದ ಡಾ. ಸೋಮಶೇಕರ ಇಮ್ರಾಪೂರ ಅವರು ಉದ್ಘಾಟಿಸಲಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾದ್ಯಾಪಕರಾದ ಡಾ. ಚಲುವರಾಜ ರವರು ಮಂಟೆ ಸ್ವಾಮಿಯ ಮೌಖಿಕ ಪರಂಪರೆಯಬಗ್ಗೆ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನಡೆಸಿಕೊಡಲಿದ್ದಾರೆ. ಧಾರವಾಡದ ವಿಶ್ರಾಂತ ಶಾಲಾ ಶಿಕ್ಷಣ ಆಕಾಶವಾಣಿ ಅಧಿಕಾರಿಗಳಾದ ಬಿ. ಎಚ್. ಕರಡಿಯವರು ಭುವನೇಶ್ವರಿ ಭಾವಚಿತ್ರಕ್ಕೆ ಗೌರವ ಸಮರ್ಪಿಸಲಿದ್ದಾರೆ. ಗದಗಿನ ಪ್ರೋ. ಮಲ್ಲಣ್ಣ ರಾಟಿ, ರಾಯಚೂರು ಜಿಲ್ಲಾ ಕಸಾಪ ಅಧ್ಯಕ್ಷ ಮಹಾಂತೇಶ ಮಸ್ಕಿ, ಬಳ್ಳಾರಿ ಜಿಲ್ಲಾ ಕಸಾಪ ಅಧ್ಯಕ್ಷ ಸಿರಿಗೇರಿ ಎರಿಸ್ವಾಮಿ, ಗದಗ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಶಿವಪ್ಪ ಕುರಿ ಹಾಗೂ ಜಿಲ್ಲೆಯ ಎಲ್ಲಾ ತಾಲುಕಾ ಕಸಾಪ ಅಧ್ಯಕ್ಷರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.
ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷ ವೀರಪ್ಪ ನಿಂಗೋಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸದಾಶಿವ ಪಾಟೀಲ ಹಾಗೂ ಸಂಗಡಿಗರು ಗೀತ ಗಾಯನ ನಡೆಸಿಕೊಡಲಿದ್ದಾರೆ. ಶಿ.ಕಾ. ಬಡಿಗೇರ ಆಶಯನುಡಿ ಆಡಲಿದ್ದಾರೆ. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಅಕ್ಬರ ಕಾಲಿಮಿರ್ಚಿ, ಶಿವಾನಂದ ಮೇಟಿ, ಜಿಲ್ಲಾ ಗೌರವ ಕೋಶಾಧ್ಯಕ್ಷ ಆರ್.ಎಸ್ ಸರಗಣಾಚಾರಿ ಕಾರ್ಯಕ್ರಮಕ್ಕೆ ಆಗಮಿಸಲು ಸರ್ವರನ್ನು ಕೋರಿದ್ದಾರೆ.

0 comments:
Post a Comment