ಆಂಧ್ರ ಹೈಕೋರ್ಟ್ ತೀರ್ಪು
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮುಹಮ್ಮದ್ ಅಝರುದ್ದೀನ್ ವಿರುದ್ಧ ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ(ಬಿಸಿಸಿಐ) ವಿಧಿಸಿರುವ ಆಜೀವ ನಿಷೇಧವನ್ನು ಆಂಧ್ರಪ್ರದೇಶ ಹೈಕೋರ್ಟ್ ರದ್ದುಪಡಿಸಿದೆ. ಹೈಕೋರ್ಟ್‌ನ ವಿಭಾಗೀಯ ಪೀಠ ಇಂದು ಅಧೀನ ನ್ಯಾಯಾಲಯ ನೀಡಿರುವ ಆದೇಶವನ್ನು ಪಕ್ಕಕ್ಕೆ ತಳ್ಳಿ ಅಝುರುದ್ದೀನ್ ಪರ ತೀರ್ಪು ನೀಡಿದೆ.ಡಿ.5, 2000ರಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪದಲ್ಲಿ ಅಝರುದ್ಧೀನ್ ವಿರುದ್ಧ ಬಿಸಿಸಿಐ ಆಜೀವ ನಿಷೇಧ ವಿಧಿಸಿತ್ತು. ಬಿಸಿಸಿಐನ ಆದೇಶವನ್ನು ಅಝರುದ್ದೀನ್ ನಗರದ ಸಿವಿಲ್ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಆದರೆ ನ್ಯಾಯಾಲಯವು ನಿಷೇಧವನ್ನು ಎತ್ತಿ ಹಿಡಿದಿತ್ತು. ಸಿವಿಲ್ ನ್ಯಾಯಾಲಯದ ತೀರ್ಪಿನ ವಿರುದ್ಧ ಅಝರುದ್ದೀನ್ ಆಂಧ್ರ ಪ್ರದೇಶದ ಹೈಕೋರ್ಟ್‌ನ ಮೊರೆ ಹೋಗಿದ್ದರು.ಆಂಧ್ರಪ್ರದೇಶದ ಹೈಕೋರ್ಟ್‌ನ ನ್ಯಾಯಾಧೀಶರಾದ ಅಶುತೋಷ್ ಮೊಹಾಂತ ಮತ್ತು ಕೃಷ್ಣ ಮೋಹನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠ ಅಝರುದ್ದೀನ್ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿದೆ.
0 comments:
Post a Comment