ನ. ೧೬ ರಂದು ಹಾಲವರ್ತಿಯಲ್ಲಿ ೨೨೦ ಕೆ.ವಿ. ವಿದ್ಯುತ್ ಸ್ಟೇಷನ್‌ಗೆ ಅಡಿಗಲ್ಲು
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ೨೨೦/೧೧೦/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಅಡಿಗಲ್ಲು ಸಮಾರಂಭ ನ. ೧೬ ರಂದು ಮಧ್ಯಾಹ್ನ ೩ ಗಂಟೆಗೆ ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ನಡೆಯಲಿದೆ.
೨೨೦ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಶಂಕುಸ್ಥಾಪನೆಯನ್ನು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರು ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಜಿ.ಪಂ. ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್, ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಶಿವರಾಜ ಎಸ್ ತಂಗಡಗಿ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ್, ಶಾಸಕರುಗಳಾದ (ವಿಧಾನಪರಿಷತ್) ಹಾಲಪ್ಪ ಆಚಾರ್, ಶಶಿಲ್ ನಮೋಶಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ತಾ.ಪಂ. ಅಧ್ಯಕ್ಷ ದೇವಣ್ಣ ಭರಮಪ್ಪ ಮೇಕಾಳಿ, ಜಿ.ಪಂ. ಸದಸ್ಯೆ ಸೀತಾ ಹಲಗೇರಿ, ತಾ.ಪಂ. ಸದಸ್ಯೆ ಲಕ್ಷ್ಮವ್ವ ದೇವಪ್ಪ ಪೂಜಾರ, ಕುಣಿಕೇರಿ ಗ್ರಾ.ಪಂ. ಅಧ್ಯಕ್ಷೆ ಸರಿತಾ ಯಂಕಪ್ಪ ಮೂಲಿಮನಿ, ಉಪಾಧ್ಯಕ್ಷ ರಾಮಚಂದ್ರ ನಾಯಕ್ ಮುಂತಾದವರು ಭಾಗವಹಿಸುವರು.

0 comments:
Post a Comment