PLEASE LOGIN TO KANNADANET.COM FOR REGULAR NEWS-UPDATES


  ಕೃಷಿ ವಿಶ್ವವಿದ್ಯಾಲಯ ರಾಯಚೂರು, ಕೃಷಿ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ ಗಂಗಾವತಿ, ಕೃಷಿ ಇಲಾಖೆ ಗಂಗಾವತಿ ಹಾಗೂ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗಂಗಾವತಿಯ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನ.೨೪ ರಿಂದ ನ.೨೫ ರವರೆಗೆ ಎರಡು ದಿನಗಳ ಕಾಲ ಕೃಷಿ ಮೇಳ ಹಾಗೂ ಗಂಗಾವತಿ ತಾಲೂಕ ಕೃಷಿ ಮಾಹಿತಿ ಆಂದೋಲನ ಸಮಾರಂಭ ಜರುಗಲಿದ್ದು, ಕಾರ್ಯಕ್ರಮದ ಉದ್ಘಾಟನೆ ನ. ೨೪ ರಂದು ಬೆಳಿಗ್ಗೆ ೧೧ ಗಂಟೆಗೆ ಜರುಗಲಿದೆ.
  ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಪರಣ್ಣ ಮುನವಳ್ಳಿ ಅವರು ವಹಿಸಲಿದ್ದಾರೆ.  
ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಸಂಸದ ಶಿವರಾಮಗೌಡ ಅವರು ನೆರವೇರಿಸುವರು. ಕೃಷಿ ಯಂತ್ರೋಪಕರಣಗಳ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಕನಕಗಿರಿ ಶಾಸಕ ಶಿವರಾಜ ತಂಗಡಗಿ ಅವರು ನೆರವೇರಿಸುವರು.  ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಈಶಣ್ಣ ಗುಳಗಣ್ಣವರ, ಸಂಗಣ್ಣ ಕರಡಿ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ, ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಶಿವಣ್ಣ ಮೂಲಿಮನಿ, ತಾ.ಪಂ. ಅಧ್ಯಕ್ಷ ಜೆ.ಬಸವರಾಜ ಹುಲಿಯಪ್ಪ, ತಾಲೂಕ ಕೃಷಿಕ ಸಮಾಜ ಅಧ್ಯಕ್ಷ ಚನ್ನಮ್ಮ ಮಳಗಿ, ಎಪಿಎಂಸಿ ಅಧ್ಯಕ್ಷ ತಿಪ್ಪೆರುದ್ರಸ್ವಾಮಿ, ನಗರಸಭೆ ಅಧ್ಯಕ್ಷ ಪಾಪಣ್ಣ ನಾಯಕ, ತಾ.ಪಂ. ಉಪಾಧ್ಯಕ್ಷೆ ಮೈತ್ರಾ ಉಮೇಶ ನಾಯಕ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ.ಪದ್ಮಯ್ಯ ನಾಯಕ ಮುಂತಾದವರು ಭಾಗವಹಿಸುವರು.

Advertisement

0 comments:

Post a Comment

 
Top