ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್
ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ತುಂಗಭದ್ರಾ ಜಲಾಶಯದ ತಟದಲ್ಲಿರುವ ಪ್ರಸಿದ್ಧ ಪಂಪಾವನ ಅಭಿವೃದ್ಧಿಗೆ ೫ ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ಖಾತೆ ಸಚಿವ ಆನಂದ್‌ಸಿಂಗ್ ಅವರು ಹೇಳಿದರು.
ಕೊಪ್ಪಳ ನಗರದ ಹಜರತ್ ಮರ್ದಾನಲಿ ದರ್ಗಾ ಬಳಿ ೫೦ ಲಕ್ಷ ರೂ. ವೆಚ್ಚದಲ್ಲಿ ಶಾದಿಮಹಲ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳು ಲಭ್ಯವಿದ್ದು, ಪ್ರವಾಸೋದ್ಯಮ ಅಭಿವೃದ್ಧಿಯಿಂದ ಜಿಲ್ಲೆಯ ಖ್ಯಾತಿ ಇನ್ನಷ್ಟು ಹೆಚ್ಚಲಿದೆ. ಮುನಿರಾಬಾದ್ ಬಳಿ ಇರುವ ಪಂಪಾವನ ಜಪಾನ್ ಮಾದರಿಯಲ್ಲಿ ರೂಪಿಸಲಾಗಿದ್ದು, ಪಂಪಾವನದ ಸೌಂದರ್ಯ ಇನ್ನಷ್ಟು ಹೆಚ್ಚಿಸಿ, ಈ ಉದ್ಯಾನವನದಲ್ಲಿ ಹೆಚ್ಚಿನ ಸೌಕರ್ಯಗಳನ್ನು ಒದಗಿಸಲು ಕೊಪ್ಪಳ ಶಾಸಕರಾದ ಸಂಗಣ್ಣ ಕರಡಿ ಅವರ ಒತ್ತಾಯವಿದೆ. ಇವರ ಮನವಿಯನ್ನು ಪುರಸ್ಕರಿಸಿ, ಪಂಪಾವನವನ್ನು ೧೦ ಕೊಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಗುವುದು. ಪ್ರಥಮ ಹಂತದಲ್ಲಿ ೫ ಕೋಟಿ ರೂ. ಅನುದಾನ ಒದಗಿಸಲು ಕ್ರಮ ವಹಿಸಲಾಗುವುದು ಎಂದರು.

ಕರ್ನಾಟಕ ರಾಜ್ಯದಿಂದ ಪ್ರಾರಂಭಿಸಲಾಗಿರುವ ಗೋಲ್ದನ್ ಚಾರಿಯೇಟ್ ಪ್ರವಾಸಿ ರೈಲಿಗೆ ರಾಷ್ಟ್ರ ಪ್ರಶಸ್ತಿ ಲಭ್ಯವಾಗಿದ್ದು, ದೇಶದಲ್ಲಿ ಇದೇ ಮಾದರಿಯಲ್ಲಿರುವ ಮಹಾರಾಷ್ಟ್ರ, ರಾಜಸ್ಥಾನ ಹಾಗೂ ಕರ್ನಾಟಕ ರಾಜ್ಯದ ರೈಲುಗಳ ಪೈಕಿ, ನಮ್ಮ ರಾಜ್ಯದ ಗೋಲ್ದನ್ ಚಾರಿಯೇಟ್ ರೈಲಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ. ಕೇಂದ್ರ ಪ್ರವಾಸೋದ್ಯಮ ಸಚಿವರಾದ ಚಿರಂಜೀವಿ ಅವರು ಈ ಪ್ರಶಸ್ತಿಯನ್ನು ಕೊಡಮಾಡಿದ್ದಾರೆ ಎಂದರು.
ಕೊಪ್ಪಳ ಶಾಸಕರಾಗಿರುವ ಸಂಗಣ್ಣ ಕರಡಿ ಅವರು ಕೊಪ್ಪಳ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸುತ್ತಿದ್ದು, ಅವರ ಪ್ರಯತ್ನದ ಫಲವಾಗಿ ಇದೀಗ ಕೊಪ್ಪಳ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಹರಿದು ಬರುತ್ತಿದೆ. ಮುಂಬರುವ ದಿನಗಳಲ್ಲಿ ಕ್ಷೇತ್ರ ಇನ್ನಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚು ಅನುದಾನ ಒದಗಿಸುವ ಭರವಸೆ ಇದೆ ಎಂದರು.
ಕೊಪ್ಪಳ ಶಾಸಕ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಾಸಿರುದ್ದೀನ್ ಪ್ರಾರಂಭದಲ್ಲಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment