ಕೊಪ್ಪಳ, ಡಿ. ೩೧: ಇಂದಿನ ಶಿಕ್ಷಣದ ಜೊತೆ ಜೊತೆಗೆ ತಾಂತ್ರಿಕ ಶಿಕ್ಷಣ ಅಳವಡಿಸಿರುವುದು ಮಕ್ಕಳ ಬೌಧಿಕ ಶೈಕ್ಷಣಾಭಿವೃದ್ಧಿಗೆ ಸಾಕಷ್ಟು ಪೂರಕ ಹಾಗೂ ಶಿಕ್ಷಣದ ಗುಣಮಟ್ಟ ಮತ್ತಷ್ಟು ಹೆಚ್ಚಿಸಿದೆ ಎಂದು ಸೈಯದ್ ಪೌಂಡೇಷನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖಂಡ ಕೆ.ಎಂ. ಸೈಯದ್ ಅಭಿಪ್ರಾಯಪಟ್ಟರು.
ಅವರು ನಗರದ ಉದಯ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ೧೪ ವಾರ್ಷಿಕೋತ್ಸವ ಕಾರ್ಯಕ್ರಮದ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಇಂದಿನ ಶೈಕ್ಷಣಿಕ ಸ್ಪರ್ಧೆಯಲ್ಲಿ ಕಂಪ್ಯೂಟರ್ ಶಿಕ್ಷಣ ಅತ್ಯಗತ್ಯವಾಗಿದೆ ಪ್ರತಿಯೊಬ್ಬ ಮಕ್ಕಳು ಇದರ ಲಾಭ ಪಡೆದು ಉನ್ನತ ಮಟ್ಟದ ಶಿಕ್ಷಣ ಪಡೆಯುವ ಮೂಲಕ ಕೀರ್ತಿ ತರುವಂತಾಗಲಿ ಎಂದು ಆಶಿಸಿದರು.
ಉದಯ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಂಗಾಧರ ಕೆಸರಿಮಠ ಮಾತನಾಡಿ, ನಮ್ಮ ಸಂಸ್ಥೆ ಕಳೆದ ೧೪ ವರ್ಷಗಳಿಂದ ನಗರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಾ ಬಂದಿದೆ. ನಮ್ಮಲ್ಲಿ ವಿದ್ಯಾರ್ಜನೆ ಪಡೆದ ಸಾಕಷ್ಟು ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣದಲ್ಲಿ ಹಾಗೂ ವೃತ್ತಿಗಳ ಸೇವೆಯಲ್ಲಿರುವುದು ನಮ್ಮ ಹೆಮ್ಮೆಯ ವಿಷಯವೆಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಲೆಕ್ಕ ಪರಿಶೋಧಕ ವಿ.ಬಿ.ಅಂಗಡಿ, ಹಾಸ್ಯ ಕಲಾವಿದ ಗುಂಡಾಚಾರಿ ಗಲಗಲಿ ಸೇರಿದಂತೆ ಇನ್ನಿತರರು ಹಾಜರಿದ್ದರು.
0 comments:
Post a Comment