PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಡಿ.೨೬ : ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ  ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿ.೨೮ ರಂದು ಬೆಳಿಗ್ಗೆ ೧೦.೩೦ ಕ್ಕೆ ಬಾಲಕಿಯರ ಸ.ಪ.ಪೂ.ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಸಂಗಣ್ಣ ಕರಡಿ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಸಂಸದ ಶಿವರಾಮಗೌಡ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಶಿವರಾಜ ತಂಗಡಗಿ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ, ಶಶೀಲ್ ಜಿ.ನಮೋಶಿ, ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ತಾ.ಪಂ.ಅಧ್ಯಕ್ಷ ದೇವಣ್ಣ ಭರಮಪ್ಪ ಮೆಕಾಳಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎನ್.ಮಂಜುನಾಥ ಪ್ರಸಾದ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಪ್ರಕಾಶ, ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ, ರಾಜ್ಯ ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಭು ಕಿಡದಾಳ ಅವರು ಆಗಮಿಸುವರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕ ಜಿ.ಹೆಚ್.ವೀರಣ್ಣ   ತಿಳಿಸಿದ್ದಾರೆ.

Advertisement

0 comments:

Post a Comment

 
Top